ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ - Kornersite

Kornersite

Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು ತಂದೆ – ತಾಯಿಯನ್ನು ಕಳೆದುಕೊಂಡಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಭಾನುವಾರ ಹಮ್ಮಿಕೊಂಡ ಪ್ರಚಾರದ ಸಮಯದಲ್ಲಿ ದತ್ತು ಪಡೆದಿದ್ದಾರೆ.
ಈ ಇಬ್ಬರು ಮಕ್ಕಳು ತಮ್ಮ ಸೋದರ ಮಾವನ ಮನೆಯಲ್ಲಿ ವಾಸವಿದ್ದರು. ಸೋದರ ಮಾವನಿಗೂ ಕಷ್ಟ ಇರುವುದರಿಂದ ಜನಾರ್ದನ ರೆಡ್ಡಿಯವರು ಜ್ಯೋತಿ ಸ್ವರೂಪ್, ವೇಣು ಎನ್ನುವ ಇಬ್ಬರು ಮಕ್ಕಳನ್ನು ದತ್ತು ಪಡೆಕೊಂಡಿದ್ದಾರೆ. ಮಕ್ಕಳ ಶಿಕ್ಷಣ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು ನನ್ನ ಮಕ್ಕಳಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನೂತನ ಪಕ್ಷದಿಂದ ಈಗಾಗಲೇ 12 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ತಿಂಗಳ ಅಂತ್ಯದೊಳಗೆ 30ಕ್ಕೂ ಅಧಿಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಮಾಜಿ ಸಿಎಂ ಆಸೆ ತಣ್ಣೀರು- ಗರಿಗೆದರಿದ ರಾಜಕೀಯ ಚಟುವಟಿಕೆ!

ಕೋಲಾರ : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.ಸಿದ್ದರಾಮಯ್ಯ ಅವರು ಇತ್ತೀಚೆಗೆ