ಬೆಂಗಳೂರು : ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದೆ.
ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಿದ್ದ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಘೋಷಿಸಿದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಪದವಿ ಓದಿದವರಿಗೆ ನಿರುದ್ಯೋಗ ಭತ್ಯೆಯಾಗಿ 3 ಸಾವಿರ ರೂ., ಡಿಪ್ಲೋಮಾ ಓದಿದವರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಯುವ ನಿಧಿ ಯೋಜನೆಯನ್ನು ಘೋಷಣೆ ಮಾಡಿತು.
ಈಗಾಗಲೇ ಕಾಂಗ್ರೆಸ್ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ
ಕಾಂಗ್ರೆಸ್ ನಿಂದ 4ನೇ ಗ್ಯಾರಂಟಿ ಘೋಷಣೆ!
