ಕೊಪ್ಪಳ : ಎರಡು ಗುಂಪುಗಳ ನಡುವೆ ನಡು ರಸ್ತೆಯಲ್ಲಿಯೇ ಮಾರಾಮಾರಿ ನಡೆದಿರುವ ಘಟನೆ ಜಿಲೆಯಲ್ಲಿ ನಡೆದಿದೆ.
ಇಸ್ಪೀಟ್ ಆಡಿಸುವ ಎರಡು ಗುಂಪುಗಳ ಮಧ್ಯೆ ಜಿಲ್ಲೆಯ ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕನಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಭಾನುವಾರ ಸಂಜೆ 10ಕ್ಕೂ ಹೆಚ್ಚಿದ್ದ ಯುವಕರ ಗುಂಪೊಂದು ಬೈಕ್ ಮೇಲೆ ಹೊರಟಿದ್ದ ಯುವಕನನ್ನು ತಡೆದು ಹಲ್ಲೆ ನಡೆಸಿದ್ದಾರೆ. ನಂತರ ಯುವಕ ರಸ್ತೆ ಮೇಲೆ ಬಿದ್ದಿದ್ದ. ಆದರೂ ಬಿಡದ ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಬಸ್, ಕಾರು ಮತ್ತು ಬೈಕ್ ಮೇಲಿದ್ದ ಜನ ಘಟನೆಯನ್ನು ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತಿದ್ದರು. ಈ ಭಯಾನಕ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಕುರಿತು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ನಡು ರಸ್ತೆಯಲ್ಲಿಯೇ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!
