Kornersite

Politics

ಮಾಜಿ ಸಿಎಂ ಆಸೆ ತಣ್ಣೀರು- ಗರಿಗೆದರಿದ ರಾಜಕೀಯ ಚಟುವಟಿಕೆ!

ಕೋಲಾರ : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಸಿದ್ದರಾಮಯ್ಯ ಅವರು ಇತ್ತೀಚೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವನ್ನು ತಿಳಿಸಿದ್ದರು. ಬೆನ್ನಲ್ಲಿಯೇ ಕೋಲಾರ ಕ್ಷೇತ್ರಕ್ಕೆ ಭೇಟಿ ನೀಡಿ, ಹಲವಾರು ಸಭೆಗಳನ್ನು ಕೂಡ ನಡೆಸಿದ್ದರು. ವಾರ್ಡ್ ಸಭೆಗಳು, ಗ್ರಾಮಾಂತರ‌ ಸಭೆಗಳು ಸೇರಿದಂತೆ‌ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಅಷ್ಟೊಂದು ಸೇಫ್ ಅಲ್ಲ, ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಕೋಲಾರದಿಂದ ಯೂಟರ್ನ್ ಹೊಡೆದ ಮೇಲೆ ಕೋಲಾರದ ಕಾಂಗ್ರೆಸ್ ವಲಯದಲ್ಲಿ ಸಿದ್ದು ಬದಲಿಗೆ ಯಾರು ಕಾಂಗ್ರೆಸ್ ಅಭ್ಯರ್ಥಿ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.
ಅಲ್ಲದೇ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿವೆ. ಈ ಹಿನ್ನೆಲೆಯಲ್ಲಿ ಕೋಲಾರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಗಳ ಲಿಸ್ಟ್‌ ನಲ್ಲಿ ಎ.ಶ್ರೀನಿವಾಸ್, ಎಲ್.ಎ. ಮಂಜುನಾಥ್, ಬ್ಯಾಲಹಳ್ಳಿ ಗೋವಿಂದಗೌಡ, ಊರುಬಾಗಿಲು ಶ್ರೀನಿವಾಸ್, ಚಿಕ್ಕರಾಯಪ್ಪ, ಕೊತ್ತೂರು ಮಂಜುನಾಥ್, ವಿ.ಆರ್. ಸುದರ್ಶನ್ ಸೇರಿ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿದ‌ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಬಣ ರಾಜಕೀಯಗಳು ಮುನ್ನೆಲೆಗೆ ಬರುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿವೆ. ಇಷ್ಟು ದಿನ ಸಿದ್ದರಾಮಯ್ಯ ಬರುತ್ತಾರೆ ಎನ್ನುವ ಕಾರಣಕ್ಕೆ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕರ ಮುನಿಸು ಹಾಗೂ ಬಣ ರಾಜಕೀಯ ಮತ್ತೆ ಮುನ್ನೆಲೆಗೆ ಬಂದು ಕೆ.ಹೆಚ್. ಮುನಿಯಪ್ಪ ತಮ್ಮ ಸೋಲಿನ ಸೇಡು ತೀರಿಸಿಕೊಳ್ಳುವ ಸಾಧ್ಯತೆ ತಳ್ಳಿಹಾಕುವಂತಿಲ್ಲ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು