ಬೆಂಗಳೂರು : ಬಂಡವಾಳ ಹೂಡಿಕೆ ಹಾಗೂ ಉದ್ಯೋಗಾವಾಕಾಶ ಒದಗಿಸುವ ನಿಟ್ಟಿನಲ್ಲ ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 138ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. 50 ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 17 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 3552.66ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 6933 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಮುರುಗೇಶ ನಿರಾಣಿ ಹೇಳಿದ್ದಾರೆ.
15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 59 ಹೊಸ ಯೋಜನೆಗಳಿಂದ ಒಟ್ಟು 1542.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 6984 ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಎಂದು ಹೇಳಿದ್ದಾರೆ