Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ.
ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!
ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇನ್ನೂ 100 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿಯಿತ್ತು. ಈ ಪೈಕಿ ಇಂದು 42 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಿಸಿದೆ. ಆದರೆ, ಇನ್ನು 58 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಬಿಜೆಪಿಯತ್ತ ಎಲ್ಲ ಪಕ್ಷಗಳು ಹಾಗೂ ಮತದಾರರು ದೃಷ್ಟಿ ನೆಟ್ಟಿದ್ದಾರೆ. ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಎರಡು ದಿನಗಳ ರಾಜ್ಯ ಚುನಾವಣಾ ಸಮಿತಿ ಸಭೆ ನಿನ್ನೆ ಅಂದರೆ ಏಪ್ರಿಲ್ 5ರ ರಾತ್ರಿ ಮುಕ್ತಾಯಗೊಂಡಿದೆ.
ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮ ಮಾಡಲಾಗಿದ್ದು, ನಾಳೆ(ಏಪ್ರಿಲ್ 07) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸಂಭಾವ್ಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಪ್ರತಿ ಕ್ಷೇತ್ರಕ್ಕೆ 3 ಸಂಭಾವ್ಯ ಅಭ್ಯರ್ಥಿಗಳಿರುವ ಪಟ್ಟಿಯನ್ನ ರಾಜ್ಯ ಬಿಜೆಪಿ ಸಿದ್ಧ ಮಾಡಿದೆ. ಇದರಲ್ಲಿ ಸಿಎಂ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ಇವೆ ಎನ್ನಲಾಗಿದೆ. ಅಲ್ಲದೇ, , ವಿಜಯೇಂದ್ರ ಸ್ಪರ್ಧಿಸುವ ಶಿಕಾರಿಪುರ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ಪಟ್ಟಿ ಹಿಡಿದುಕೊಂಡು ನಾಳೆ ನಾಳೆ ಮಧ್ಯಾಹ್ನ 2.30ಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಿಇಸಿ ಸಭೆ ನಡೆಯಲಿದೆ. ಬಳಿಕ ಸರ್ವೇ ರಿಪೋರ್ಟ್, ಬ್ಯಾಲೆಟ್ ವೋಟ್ ಅಭಿಪ್ರಾಯ ಆಧರಿಸಿ ಟಿಕೆಟ್ ಫೈನಲ್ ಪಟ್ಟಿ ಬಿಡುಗಡೆಯಾಗಲಿದೆ.
ಈಗಾಗಲೇ ಏಪ್ರಿಲ್ 8 ರಂದು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ಸಂಸದೀಯ ಮಂಡಳಿಯ ಸಭೆಯ ಬಳಿಕ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಫೈನಲ್ ಆಗಲಿದೆ. ಇದರ ಮಧ್ಯೆ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಮರಳಿ ಹೋದ ನಂತರ ಪಟ್ಟಿ ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇನ್ನೂ ನಾಲ್ಕೈದು ದಿನಗಳ ಕಾಲ ಬಿಜೆಪಿ ಪಟ್ಟಿಗಾಗಿ ಕಾಯಬೇಕಾಗಿದೆ.