Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ(Karnataka Assembly Election) ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ತುಂಬಿದೆ. ಸಹಜವಾಗಿ ಟಿಕೆಟ್ ವಂಚಿತರು, ಬಂಡಾಯ ಏಳುವುದು ಸಹಜ.
ಬಿಜೆಪಿ(BJP) ಇನ್ನೂ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ. ಈಗಾಗಲೇ ಕಾಂಗ್ರೆಸ್ (congress) ತನ್ನ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಲು ಆರಂಭವಾಗಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರು. ಈ ಪಟ್ಟಿಯಲ್ಲಿ ಹಾಲಿ ಶಾಸಕರು ಹಾಗೂ ಓರ್ವ ಆಕಾಂಕ್ಷಿ ಇರುವ ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಲಾಗಿತ್ತು. ಹೀಗಾಗಿ ಈ ಸಂದರ್ಭದಲ್ಲಿ ಬಂಡಾಯ ಕಡಿಮೆ ಎನ್ನಲಾಗಿತ್ತು. ಆದರೆ, ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ 42 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಹೀಗಾಗಿ ಟಿಕೆಟ್ ವಂಚಿತರು ಬಂಡಾಯ ಘೋಷಿಸುತ್ತಿದ್ದಾರೆ.
42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು (Candidate) ಪ್ರಕಟಿಸಿದ ನಂತರ ಕಾಂಗ್ರೆಸ್ (Congress) ಪಕ್ಷನಲ್ಲಿ ಬಂಡಾಯದ ಬಾವುಟ ಹೆಚ್ಚಾಗಿ ಹಾರುವ ಲಕ್ಷಣ ಗೋಚರವಾಗುತ್ತಿದೆ. ಕೆಪಿಸಿಸಿ (KPCC) ನಾಯಕರ ವಿರುದ್ಧ ಬಹಿರಂಗ ಆಕ್ರೋಶ ಹೊರಹಾಕುತ್ತಿದ್ದಾರೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್‍ವಿ ದತ್ತಾ
ಟಿಕೆಟ್ ವಿಚಾರದಲ್ಲಿ ಸಿದ್ದರಾಮಯ್ಯ ನಂಬಿಕೊಂಡಿದ್ದರು. ಆದರೆ, ಅವರಿಗೆ ನಿರಾಸೆಯಾಗಿದೆ. ಕ್ಷೇತ್ರದ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದಿರುವ ಅವರು, ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ನೋವು ಹೊರಹಾಕಿದ್ದಾರೆ. ಇದೇ ಭಾನುವಾರ ಬೆಂಬಲಿಗರ ಸಭೆ ಕರೆದು ಮುಂದಿನ ನಡೆ ನಿರ್ಧರಿಸಲಿದ್ದಾರೆ. ಹಾನಗಲ್ ನಲ್ಲಿ ಮಾಜಿ ಸಚವಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರಿ, ಕಾಂಗ್ರೆಸ್ ಗೆ ಮೋಸ ಮಾಡಿದೆ ಎಂದು ಕಣ್ಣೀರು ಸುರಿಸಿದ್ದಾರೆ.
ತುಮಕೂರು ನಗರದಲ್ಲಿ ಶಫಿ ಅಹ್ಮದ್ ಕುಟುಂಬಕ್ಕೆ ಟಿಕೆಟ್ ಕೈ ತಪ್ಪಿದೆ. ಇಕ್ಬಾಲ್ ಅಹ್ಮದ್‍ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿರುವ ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕುಣಿಗಲ್ ನಲ್ಲಿ ಮತ್ತೆ ಟಿಕೆಟ್ ಕೈತಪ್ಪಿರುವುದಕ್ಕೆ ಮಾಜಿ ಶಾಸಕ ರಾಮಸ್ವಾಮಿಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರ. ನನಗೆ ಡಿಕೆ ಸಹೋದರರಿಂದ ಟಿಕೆಟ್ ವಂಚನೆಯಾಗಿದೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.
ರಘು ಆಚಾರ್ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ರಘು ಆಚಾರ್ ಆಕ್ರೋ ವ್ಯಕ್ತಪಡಿಸುತ್ತಿದ್ದಾರೆ. ಇದೇ 14ರಂದು ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಏಪ್ರಿಲ್ 17ಕ್ಕೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ರಘು ಆಚಾರ್ ಜೆಡಿಎಸ್ ಸೇರುತ್ತಿರುವುದರಿಂದ ಬಸವರಾಜನ್ ನಡೆ ಕುತೂಹಲ ಕೆರಳಿಸಿದೆ. ಬಾಬಾ ಸಾಹೇಬ್ ಪಾಟೀಲ್‍ಗೆ ಕಾಂಗ್ರೆಸ್ ಟಿಕೆಟ್ ನೀಡಿದ ಪರಿಣಾಮ ಡಿಬಿ ಇನಾಂದಾರ್ ಕುಟುಂಬ, ಪಕ್ಷಕ್ಕೆ ರಾಜೀನಾಮೆ ನೀಡಿದೆ. ಡಿಬಿ ಇನಾಂದಾರ್ ಆಸ್ಪತ್ರೆಯಲ್ಲಿರುವ ಕಾರಣ ಅವರ ಸೊಸೆ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ಯಾದಗಿರಿಯಲ್ಲಿ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್‌ಗೆ ಟಿಕೆಟ್ ನೀಡಲಾಗಿದೆ. ಈ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳಾದ ಅಬ್ದುಲ್ ಜಲೀಲ್, ಎಸ್‍ಬಿ ಕಾಮರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮೊಗವೀರ ಮುಖಂಡ ಪ್ರಸಾದ್ ಕಾಂಚನ್‍ಗೆ ಟಿಕೆಟ್ ಘೋಷಣೆ ಮಾಡಿದ್ದಕ್ಕೆ ಕೃಷ್ಣಮೂರ್ತಿ ಆಚಾರ್ಯ ಕಿಡಿಕಾರಿದ್ದಾರೆ.
ಹೆಚ್.ವೈ ಮೇಟಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದರಿಂದ ದೇವರಾಜ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ನೀಡಲಾಗಿದೆ. ಹೆಚ್.ಆರ್. ಶ್ರೀನಾಥ್ ಟಿಕೆಟ್ ಮಿಸ್ ಆಗಿರುವುದರಿಂದ ಕಾಂಗ್ರೆಸ್ ವಿರುದ್ಧ ಈಡಿಗ ಸಮುದಾಯ ಆಕ್ರೋಶ ಹೊರಹಾಕಿದೆ. ಚನ್ನಗಿರಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ವಡ್ನಾಳ್ ರಾಜಣ್ಣ ಸಹೋದರನ ಪುತ್ರ ವಡ್ನಾಳ್ ಆಶೋಕ್‍ಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮಂಡ್ಯದಲ್ಲಿ ರವಿಕುಮಾರ್ ಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ರಾಧಕೃಷ್ಣ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತೆ ಜೆ.ಟಿ. ಪಾಟೀಲ್‍ಗೆ ಟಿಕೆಟ್ ಕೊಟ್ಟಿರುವುದಕ್ಕೆ ಮತ್ತೋರ್ವ ಆಕಾಂಕ್ಷಿ ಬಸವಪ್ರಭು ಸರನಾಡಗೌಡ ರೆಬೆಲ್ ಆಗುವ ಸುಳಿವು ನೀಡಿದ್ದಾರೆ.
ಮಾಜಿ ಮಂತ್ರಿ ಆರ್.ಬಿ. ತಿಮ್ಮಾಪುರ್ ಗೆ ಮತ್ತೆ ಮಣೆ ಹಾಕಿರುವುದನ್ನು ಮತ್ತೋರ್ವ ಆಕಾಂಕ್ಷಿ ಸತೀಶ್ ಬಂಡಿವಡ್ಡರ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಪಕ್ಷೇತರರಾಗಿ ಸ್ಫರ್ಧೆ ಮಾಡುವ ಸುಳಿವು ಕೊಟ್ಟಿದ್ದಾರೆ.