Bangalore : ರಣಬಿಸಿಲಿಗೆ ಮಳೆ(Rain)ರಾಯನ ಸಿಂಚನ ಸಂತಸ ತಂದಿದ್ದರೂ ಹಲವೆಡೆ ಆತಂಕಕ್ಕೆ ಕಾರಣವಾಗಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆರಾಯ ಅಬ್ಬರಿಸಿದ್ದಾನೆ. ಮಳೆರಾಯನ ಮಧ್ಯೆ ಹಲವೆಡೆ ವರುಣ (Rain) ನ ಆಗಮನವಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ.

ವಿಜಯಪುರ (Vijayapur) ಜಿಲ್ಲೆ ಕೊಲ್ಹಾರ ತಾಲೂಕಿನ ಮಸೂತಿ ಕ್ರಾಸ್ ಬಳಿ ಸಿಡಿಲು ಬಡಿದು 15 ಕುರಿಗಳು ಸಾವನ್ನಪ್ಪಿವೆ. ಕುರಿ ಮಾಲಿಕ ಚಂದ್ರಶೇಖರ್ ಗಂಭೀರವಾಗಿದ್ದಾರೆ. ರಾಯಚೂರಿನಲ್ಲ ಮಳೆಯಿಂದಾಗಿ ರೈತರು ಪರದಾಟ ನಡೆಸುವಂತಾಗಿದೆ. ಎಪಿಎಂಸಿಗೆ ತಂದಿದ್ದ ಬೆಳೆ ನೀರಲ್ಲಿ ಒದ್ದೆಯಾಗಿದ್ರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಇದನ್ನೇ ದಳ್ಳಾಳಿಗಳು ಬಂಡವಾಳ ಮಾಡಿಕೊಂಡಿದ್ದು, ಕಡಿಮೆ ಬೆಲೆಗೆ ಖರೀದಿಸ್ತಿದ್ದಾರೆ.

ಚಿಕ್ಕೋಡಿ (Chikkodi) ಉಪ ವಿಭಾಗದ ವಿವಿಧೆಡೆ ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ವಿಜಯನಗರ (Vijayanagar) ಜಿಲ್ಲೆ ಹೂವಿನ ಹಡಗಲಿ ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಮರಕ್ಕೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ.

ಗದಗ (Gadag) ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ರೋಣ ತಾಲೂಕಿನ ಕೊತಬಾಳ ಗ್ರಾಮ ಹಾಗೂ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಗುಡುಗು, ಸಿಡಿಲು, ಸಹಿತ ಮಳೆ ಸುರದಿದೆ. ಲಿಂಗದಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡಿದದಾರೆ.
ಹಾವೇರಿ, ಕೆಪ್ಪಳ, ಶಿವಮೊಗ್ಗ, ಧಾರವಾಡ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕನೂರು ತಾಲೂಕು, ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲೂ ಆಲಿಕಲ್ಲು ಸಹಿತ ಒಂದು ಗಂಟೆ ಕಾಲ ಅಬ್ಬರದ ಮಳೆ ಸುರಿದಿದ್ದು, ಧಾರವಾಡ ಜಿಲ್ಲೆಯಲ್ಲೂ ಕೆಲಕಾಲ ಉತ್ತಮ ಮಳೆಯಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಬಿಲ್ವಾಡ (ಬಿ) ಗ್ರಾಮದ ರೈತ ಭೋಗಪ್ಪ (60) ಕೃಷಿ ಕೆಲಸ ಮಾಡುತ್ತಿದ್ದಾಗ ಬಲಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಯಂಕುಬಾಯಿ ಕುಲಕರ್ಣಿ (79), ಶಾರವ್ವಾ ಪತ್ತಾರ (58) ಅವರು ಮಳೆಯಿಂದಾಗಿ ನೆನೆದಿದ್ದ ಮನೆಯ ಛಾವಣಿ ಕುಸಿದು ಸಾವನ್ನಪ್ಪಿದ್ದಾರೆ.