Kornersite

Just In Sports

IPL 2023: ಲಕ್ನೋ ಬಿಗಿ ಬೌಲಿಂಗ್ ಗೆ ಶರಣಾದ ಹೈದರಾಬಾದ್!

ಬಿಗಿ ಬೌಲಿಂಗ್ ದಾಳಿ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ನಿಂದಾಗಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.
ಐಪಿಎಲ್ ನ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ಕೆ.ಎಲ್‌.ರಾಹುಲ್‌, ಕೃನಾಲ್‌ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸುವುದರ ಮೂಲಕ ಐಪಿಎಲ್ ನಲ್ಲಿ 2ನೇ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಏಡೆನ್ ಮಾರ್ಕ್ರಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 16 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿ ಜಯ ಗಳಿಸಿತು.
ಲಕ್ನೋ ತಂಡ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ ರನ್‌ ಕಲೆಹಾಕುತ್ತ ಸಾಗಿತು. ಆರಂಭಿಕರಾಗಿ ಕಣಕ್ಕಿಳಿದ ಕೇಲ್‌ ಮೇಯರ್ಸ್‌ 13 ರನ್‌ ಗಳಿಸಿ ಔಟಾಗುತ್ತಿದ್ದಂತೆ ದೀಪಕ್‌ 7 ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. 3ನೇ ವಿಕೆಟ್‌ಗೆ ಜೊತೆಯಾದ ಕೃನಾಲ್‌ ಹಾಗೂ ಆರಂಭಿಕ ಕೆ.ಎಲ್‌. ರಾಹುಲ್‌ ಉತ್ತಮ ಜೊತೆಯಾಟವಾಡಿದರು. ಈ ಜೋಡಿ 38 ಎಸೆತಗಳಲ್ಲಿ ಈ ಜೋಡಿ 55 ರನ್‌ ಕಲೆಹಾಕಿತು. ಈ ಸಂದರ್ಭದಲ್ಲಿ ಕೃನಾಲ್‌ ಪಾಂಡ್ಯ 23 ಎಸೆತಗಳಲ್ಲಿ 34 ರನ್‌ (4 ಬೌಂಡರಿ, 1 ಸಿಕ್ಸರ್)‌ ಗಳಿಸಿದರು. ಇನ್ನೂ 36 ಎಸೆತಗಳಲ್ಲಿ ಗೆಲುವಿಗೆ 8 ರನ್‌ಗಳ ಅಗತ್ಯವಿದ್ದಾಗಲೇ ರಾಹುಲ್‌ 35 ರನ್‌ (30 ಎಸೆತ, 4 ಬೌಂಡರಿ) ಗಳಿಸಿ ಹೊರನಡೆದರು. ಕೊನೆಯಲ್ಲಿ ಮಾರ್ಕಸ್‌ ಸ್ಟೋಯ್ನಿಸ್‌ 10 ರನ್‌, ನಿಕೊಲಸ್‌ ಪೂರನ್‌ ಅಜೇಯ 11 ರನ್‌ ಗಳಿಸಿ ತಂಡವನ್ನು ಗೆಲುವಿನ ಕೇಕೆ ಹಾಕುವಂತೆ ಮಾಡಿದರು.
ಹೈದರಾಬಾದ್‌ ತಂಡದ ಪರ ರಶೀದ್‌ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ಫಜಲ್ಹಕ್ ಫಾರೂಕಿ, ಹಾಗೂ ಉಮ್ರಾನ್‌ ಮಲಿಕ್‌ ತಲಾ ಒಂದೊಂದು ವಿಕೆಟ್‌ ಪಡೆದರು.
ಹೈದರಾಬಾದ್ ತಂಡ ಪರ ಬ್ಯಾಟಿಂಗ್ ಆರಂಭಿಸಿದ ಮಯಾಂಕ್ ಅಗರ್ವಾಲ್ ಮತ್ತು ಅನ್ಮೋಲ್‌ಪ್ರಿತ್ ಸಿಂಗ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.5 ಓವರ್‌ಗಳಲ್ಲಿ ತಂಡದ ಮೊತ್ತ 21 ರನ್‌ಗಳಾಗಿದ್ದಾಗಲೇ 8 ರನ್ ಗಳಿಸಿ ಆಡುತ್ತಿದ್ದ ಮಯಾಂಕ್ ಅಗರ್ವಾಲ್ ಸುಲಭ ಕ್ಯಾಚ್‌ ನೀಡಿ ಔಟ್ ಆದರು. ರಾಹುಲ್ ತ್ರಿಪಾಠಿ ನಿಧಾನಗತಿಯ ಬ್ಯಾಟಿಂಗ್‌ ನಡೆಸಿ 41 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 35 ರನ್ ಗಳಿಸಿದರು. ಈ ವೇಳೆ ಅನ್ಮೋಲ್‌ಪ್ರಿತ್ ಸಿಂಗ್ 26 ಎಸೆತಗಳಲ್ಲಿ 31 ರನ್ (3 ಬೌಂಡರಿ, 1 ಸಿಕ್ಸರ್)‌ ಗಳಿಸಿ ಔಟಾದರು.
ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೃನಾಲ್ ಪಾಂಡ್ಯ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಿತ್ತರೆ, ಅಮಿತ್ ಮಿಶ್ರಾ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್