ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡುವ ನಿಟ್ಟಿನಲ್ಲಿ ಇಂದು ಸಿಇಸಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಪೂರ್ವಬಾವಿ ಪಟ್ಟಿ ಸಭೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಬಿ.ಎಲ್. ಸಂತೋಷ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಅರುಣ್ ಸಿಂಗ್, ಧಮೇಂದ್ರ ಪ್ರಧಾನ್ ಸೇರಿದಂತೆ 15 ಜನರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಅಲ್ಲದೇ, ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಘಟನಾ ಕಾರ್ಯದರ್ಶಿ ರಾಜೇಶ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭಾಗಿಯಾಗಲಿದ್ದಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮತ್ತು ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಿಜೆಪಿ ಸಂಸದೀಯ ಮಂಡಳಿ ಸಭೆ ಬಹುತೇಕ ಭಾನುವಾರ ಸಂಜೆ ನಡೆಯುವ ಸಾಧ್ಯತೆ
ಈಗಾಗಲೇ ಒಂದು ಕ್ಷೇತ್ರಕ್ಕೆ ಮೂವರಂತೆ 224 ಕ್ಷೇತ್ರಗಳ ಪಟ್ಟಿ ಹೈಕಮಾಂಡ್ ಅಂಗಳ ತಲುಪಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಕುರಿತಾಗಿ ಪರಾಮರ್ಶೆ ನಡೆಸಿ, ಅಂತಿಮ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಈಗಾಗಲೇ ಪಕ್ಷದ ರಾಜ್ಯ ಚುನಾವಣಾ ಸಮಿತಿಯು ಈ ವಾರದಲ್ಲಿ ಹಲವಾರು ಸುತ್ತಿನ ಸಭೆಗಳನ್ನು ನಡೆಸಿ ಪ್ರತಿ ಕ್ಷೇತ್ರಕ್ಕೆ ಎರಡ್ಮೂರು ಆಕಾಂಕ್ಷಿಗಳ ಹೆಸರನ್ನು ಅಂತಿಮಗೊಳಿಸಿದೆ.