Kornersite

International Just In

Hijab Dress Code: ಹಿಜಬ್ ಧರಿಸದಿರುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ!

Iran : ಇರಾನ್‌ ನಲ್ಲಿ (Iran) ಹಿಜಬ್ ವಿವಾದ ಭುಗಿಲೆದ್ದಿದೆ. ಅಲ್ಲಿ ಹಿಜಬ್ ಧಿಕ್ಕರಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲಿ ಮಹಿಳೆಯರಿಗೆ ಹಿಜಬ್ ಕಡ್ಡಾಯವಾಗಿದ್ದರೂ ಮಹಿಳೆಯರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಮಹಿಳೆಯರಿಗೆ (Women) ಕಡ್ಡಾಯ ಮಾಡಲಾಗಿರುವ ಡ್ರೆಸ್ ಕೋಡ್ (Dress Code) ಅನ್ನು ಧಿಕ್ಕರಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಿಳೆಯರು ನಿಯಮವನ್ನು ಉಲ್ಲಂಘಿಸುವುದನ್ನು ತಡೆಯಲು ಸದ್ಯ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಗಳನ್ನು (CCTV) ಅಳವಡಿಸಿ, ಹಿಜಬ್ (Hijab) ಧರಿಸದ ಮಹಿಳೆಯರನ್ನು ಗುರುತಿಸಿ, ನಂತರ ದಂಡ ವಿಧಿಸಲಾಗುತ್ತಿದೆ.

ಇರಾನ್‌ನಲ್ಲಿ ಈ ಕ್ರಮವನ್ನು ಹಿಜಬ್ ಕಾನೂನಿನ ವಿರುದ್ಧ ಪ್ರತಿರೋಧ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿದೆ. ಹಿಜಬ್ ಧರಿಸದೆ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ಅಂತಹವರಿಗೆ ಅಧಿಕಾರಿಗಳು ದಂಡ ವಿಧಿಸುವುದರೊಂದಿಗೆ ಮುಂದೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎನ್ನಲಾಗಿದೆ.

ಹಿಜಬ್‌ಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ಇರಾನ್‌ನಲ್ಲಿ ವಿವಾದಗಳು ಭುಗಿಲೆಳುತ್ತಿವೆ. ಕಳೆದ ಸೆಪ್ಟೆಂಬರ್‌ ನಲ್ಲಿ 22 ವರ್ಷದ ಯುವತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಯುವತಿ ಮಹ್ಸಾ ಅಮಿನಿಯನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ, ಆ ಯುವತಿ ಪೊಲೀಸ್ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ನಂತರ ಇರಾನ್‌ನಾದ್ಯಂತ ಭಾರೀ ಹಿಂಸಾಚಾರ ನಡೆದಿತ್ತು.

ಇನ್ನೊಂದೆಡೆ ಸರ್ಕಾರ ಕೂಡ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಹೀಗಾಗಿ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವುದರಿಂದ ಬಂಧನದ ಸಾಧ್ಯತೆಗಳಿದ್ದರೂ ದೇಶಾದ್ಯಂತ ಮಾಲ್, ರೆಸ್ಟೊರೆಂಟ್, ಅಂಗಡಿ, ಬೀದಿಗಳಲ್ಲಿ ಹಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಿಜಬ್ ಧರಿಸದೇ ಓಡಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೀಗೆ ಡ್ರೆಸ್ ಕೋಡ್‌ಗಳನ್ನು ಉಲ್ಲಂಘಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಹಿಳೆಯರ ನೈತಿಕ ಪೊಲೀಸ್‌ ಗಿರಿಯನ್ನು ವಿರೋಧಿಸುವ ವೀಡಿಯೋಗಳು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ.

ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಸಲುವಾಗಿ ಅವರಿಗೆ ವಿಷಪ್ರಾಶನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ದೇಶಾದ್ಯಂತ ಸಾವಿರಾರು ವಿದ್ಯಾರ್ಥಿನಿಯರು ವಿಷ ಸೇವಿಸಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ