Mubai : ಭಾರೀ ಮಳೆ(Rain), ಗಾಳಿಯಿಂದಾಗಿ ದೇವಾಲಯದ ಮುಂಭಾಗದ ಶೆಡ್ ಮೇಲೆ ಭಾರೀ ಮರವೊಂದು ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿ(Death), ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಕೋಲಾದಲ್ಲಿ (Akola) ನಡೆದಿದೆ.
ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.
ಶೆಡ್‍ನ ಅವಶೇಷಗಳ ಅಡಿ 35 ರಿಂದ 40 ಜನರು ಸಿಲುಕಿದ್ದರು. ಅದರಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ. ಐದು ಜನ ಗಾಯಗೊಂಡಿದ್ದು ಅಕೋಲಾ ಮೆಡಿಕಲ್ ಕಾಲೇಜಿಗೆ (Akola Medical College) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ (Balapur) ಚಿಕಿತ್ಸೆ ನೀಡಲಾಗುತ್ತಿದೆ. ನಾವು ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (Chief Minister’s Relief Fund) ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಘೋಷಿಸಿದ್ದಾರೆ.