Kornersite

Just In Sports

IPL 2023: ಗೆಲುವಿನ ಲಯ ಕಂಡುಕೊಂಡ ಸನ್ ರೈಸರ್ಸ್!

Hyderabad : ಶಿಸ್ತು ಬದ್ಧ ಬೌಲಿಂಗ್ ಹೂ ರಾಹುಲ್ ತ್ರಿಪಾಠಿ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಸನ್ ರೈಸರ್ಸ್ ಹೈದಾರಾಬಾದ್ ತಂಡವು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ಗೆಲುವು ದಾಖಲಿಸಿದ್ದು, ಪಂಜಾಬ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿ, ಅದರ ಹ್ಯಾಟ್ರಿಕ್ ಗೆಲುವಿನ ಕನಸಿಗೆ ತಣ್ಣೀರು ಎರಚಿದೆ.


ಟೂರ್ನಿಯಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಕಿಂಗ್ಸ್ ಪಂಜಾಬ್ ತಂಡದ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಅಲ್ಲದೇ, ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಆದರೆ, ಇನ್ನೊಂದು ಬದಿ ನಾಟಕ ಶಿಖರ್ ಧವನ್ ಏಕಾಂಗಿ ಹೋರಾಟ ನಡೆಸಿದರು. ಪರಿಣಾಮ ಕಿಂಗ್ಸ್‌ ಪಂಜಾಬ್‌ ತಂಡವು 20 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿತು. 144 ರನ್‌ಗಳ ಗುರಿ ಬೆನ್ನತ್ತಿದ್ದ ಹೈದರಾಬಾದ್‌ ತಂಡ 17.1 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಿ ಗೆಲುವು ಸಾಧಿಸಿತು.


ಇನ್ನು ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಹೈದರಾಬಾದ್‌ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಿಸಿತ್ತು. ಆರಂಭಿಕರಾದ ಹ್ಯಾರಿ ಬ್ರೂಕ್‌ 13 ರನ್‌, ಮಯಾಂಕ್‌ ಅಗರ್ವಾಲ್‌ 21 ರನ್‌ ಗಳಿಸಿ ಔಟಾಗಿದ್ದರು. ಹೀಗಾಗಿ 6 ಓವರ್‌ ಗಳಲ್ಲಿ 1 ವಿಕೆಟ್‌ ಕಳೆದುಕೊಂಡು ಕೇವಲ 34 ರನ್‌ ಗಳಿಸಿತ್ತು. ನಂತರ 3ನೇ ವಿಕೆಟ್‌ಗೆ ಜೊತೆಯಾದ ರಾಹುಲ್‌ ತ್ರಿಪಾಠಿ ಹಾಗೂ ನಾಯಕ ಏಡನ್‌ ಮಾರ್ಕಮ್ ಮುರಿಯದ 3ನೇ ವಿಕೆಟ್‌ಗೆ 52 ಎಸೆತಗಳಲ್ಲಿ 100 ರನ್‌ ಗಳ ಜೊತೆಯಾಟದ ಕಾಣಿಕೆ ನೀಡಿದರು.


ರಾಹುಲ್‌ ತ್ರಿಪಾಠಿ 48 ಎಸೆತಗಳಲ್ಲಿ 74 ರನ್‌ (10 ಬೌಂಡರಿ, 3 ಸಿಕ್ಸರ್‌) ಸಿಡಿಸಿದರೆ, ಮಾರ್ಕಮ್‌ 37 ರನ್‌ (21 ಎಸೆತ, 6 ರನ್‌) ಗಳಿಸಿ ತಂಡದ ಗೆಲುವಿಗೆ ಆಸರೆಯಾದರು. ಕಿಂಗ್ಸ್‌ ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.
ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ ಪರ ಏಕಾಂಗಿ ಹೋರಾಟ ನಡೆಸಿದ ಶಿಖರ್ ಧವನ್ 1 ರನ್‌ನಿಂದ ಶತಕವಂಚಿತರಾದರು. 66 ಎಸೆತಗಳಲ್ಲಿ ಅಜೇಯ 99 ರನ್ ಗಳಿಸಿದ ಶಿಖರ್ ತಂಡ ಮೊತ್ತ 140ರ ಗಡಿದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಸ್ಯಾಮ್‌ ಕರ್ರನ್‌ 22 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಎರಡಂಕಿಯ ಮೊತ್ತ ಗಳಿಸದ ಕಾರಣ ಪಂಜಾಬ್‌ ಅಲ್ಪಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್