Kornersite

Bengaluru Just In Karnataka State

Politics Exclusive: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ – ಸಂಸದ ಡಿ.ಕೆ. ಸುರೇಶ್

Ramanagar : ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ನಮಗೆ ಸುಪ್ರೀಂ, ಅವರ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ (DK Suresh) ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯರು. ನಮಗೆ ಅವರೇ ಮಾರ್ಗದರ್ಶಕರು. ಅವರು ಏನೇ ಆದೇಶ ಮಾಡಿದರೂ ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿರುವ ಅವರು, ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗುತ್ತಾರೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರಿಗೆ ಮಾಹಿತಿ ಕಳುಹಿಸಲಾಗಿದೆ. ಇನ್ನು ಕೇವಲ ಮೂರು ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಹೇಳಿದರು.


ಕೆಪಿಸಿಸಿ ಅಧ್ಯಕ್ಷರಿಗೆ ರಾಜ್ಯದ 224 ಕ್ಷೇತ್ರಗಳ ಜವಾಬ್ದಾರಿ ನೀಡಲಾಗಿದೆ. ನನ್ನ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಕುರಿತು ನಾನು ಗಮನಹರಿಸಿದ್ದೇನೆ. ಕೆಲವು ರಾಜಕೀಯ ಲೆಕ್ಕಾಚಾರಗಳು ಕೂಡ ನಡೆಯುತ್ತಿವೆ. ಹೀಗಾಗಿ 3ನೇ ಪಟ್ಟಿ ವಿಳಂಬವಾಗುತ್ತಿದೆ. ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ