Kornersite

Crime Just In National

Crime News : ಪ್ರೀತಿಸಿ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಚಾಕು ಹಾಕಿದ ಪಾಪಿ!

NewDelhi : ಪ್ರೀತಿಸಿ(Love) ಬ್ರೇಕಪ್ (love breakup) ಮಾಡಿಕೊಂಡಿದ್ದ ಪ್ರಿಯತಮೆಗೆ ಪಾಗಲ್ ಪ್ರೇಮಿ ಚಾಕು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.


ಈ ಘಟನೆ ದೆಹಲಿಯ ಬದರ್ಪುರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಹಾಗೂ ಪಾಗಲ್ ಪ್ರೇಮಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಬಾಲಕಿ ಮದುವೆಗೆ ಒಪ್ಪದೆ, ಬ್ರೇಕಪ್ ಮಾಡಿದ್ದಕ್ಕೆ ಚಾಕು ಹಾಕಿದ್ದಾನೆ ಎನ್ನಲಾಗಿದೆ.


ಅಪ್ರಾಪ್ತೆ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಪಾಪಿ ಚಾಕು ಹಾಕಿದ್ದಾನೆ. ಕಳೆದ 4 ವರ್ಷಗಳಿಂದ ಆರೋಪಿ ಹಾಗೂ ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಬಾಲಕಿ ಬ್ರೇಕಪ್ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾಳೆ. ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದಾಳೆ. ಹೀಗಾಗಿ ಕೋಪಗೊಂಡ ಆರೋಪಿ ಆಕೆಯ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದಾನೆ.


ಘಟನೆಯಲ್ಲಿ ಬಾಲಕಿಯ ಕತ್ತು ಹಾಗೂ ತಲೆಗೆ ಚಾಕು ಹಾಕಿದ್ದರಿಂದಾಗಿ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಬಾಲಕಿಯನ್ನು ಸ್ಥಳೀಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇತ್ತ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಮದುವೆಯಾಗಲು ನಿರಾಕರಿಸಿದ್ದರಿಂದ ಕೊಲೆ ಮಾಡಲು ನಿರ್ಧರಿಸಿದೆ. ಹೀಗಾಗಿ ಚಾಕುವಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 506 (ಕ್ರಿಮಿನಲ್ ಬೆದರಿಕೆ) ಮೊದಲಾದ ಕೆಸ್ ದಾಖಲಿಸಿಕೊಂಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ