Kornersite

Bengaluru Just In Karnataka State

Karnataka Assembly Elections 2023: ರಾಜ್ಯ ರಾಜಕೀಯ ನಿವೃತ್ತಿ ಪಡೆದ ಕೆ.ಎಸ್. ಈಶ್ವರಪ್ಪ

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಘೋಷಣೆಯಾಗಿದೆ. ಈಗಾಗಲೇ ಕಾಂಗ್ರೆಸ್ ಎರಡು ಪಟ್ಟಿಯ ಮೂಲಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಇನ್ನೇನು ಎರಡ್ಮೂರು ದಿನಗಳಲ್ಲಿ ಬಿಜೆಪಿಯ ಮೊದಲ ಪಟ್ಟಿ ಕೂಡ ಬಿಡುಗಡೆಯಾಗಲಿದ್ದು, ಈ ಕುರಿತು ಚರ್ಚೆ ಕೂಡ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.

ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸದಂತೆ ಮನವಿ ಮಾಡಿಕೊಂಡಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹೀಗಾಗಿ ಈ ನಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಮಾಡಿಕೊಂಡಿದ್ದಾರೆ.


ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು” ಎಂದು ಪತ್ರದಲ್ಲಿ ಹೇಳಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನೀಡಿದ ನಿವೃತ್ತಿ ಘೋಷಣೆ ಪತ್ರವನ್ನು ಇ-ಮೇಲ್ ಮೂಲಕ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಿದ್ದಾರೆ. ಸದ್ಯ ಈಶ್ವರಪ್ಪ ಅವರು ಶಿವಮೊಗ್ಗದ ನಿವಾಸದಲ್ಲಿಯೇ ಇದ್ದು, ಯಾವುದೇ ಹೇಳಿಕೆ ನೀಡಿಲ್ಲ.


ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸದ್ಯ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ವಿಧಾನಸಭೆ ಅಧಿವೇಶನದ ನಂತರ ವಿದಾಯ ಭಾಷಣ ಕೂಡ ಮಾಡಿದ್ದರು. ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುವುದಿಲ್ಲ. ರಾಜಕೀಯದಿಂದ ನಿವೃತ್ತಿ ಹೊಂದುತ್ತಿಲ್ಲ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದರು.


ಇತ್ತೀಚೆಗಷ್ಟೇ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಇದರ ಬೆನ್ನಲ್ಲಿಯೇ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್ಎ ರವೀಂದ್ರನಾಥ್ ಹೇಳಿದ್ದರು. ಸದ್ಯ ಈ ಸಾಲಿಗೆ ಈಗ ಈಶ್ವರಪ್ಪ ಬಂದಿದ್ದಾರೆ. ಹಿರಿಯ ನಾಯಕರಿಗೆ ಬಿಜೆಪಿ ಟೆಕೆಟ್ ನೀಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿತ್ತು. ಈ ಹಿನ್ನೆಲೆಯಲ್ಲಿ ಈ ಹಿರಿಯ ನಾಯಕರು ನಿವೃತ್ತಿ ಘೋಷಿಸಿದ್ದಾರೆಯೋ ಅಥವಾ ಹೈಕಮಾಂಡ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆಯೋ ಚರ್ಚೆ ನಡೆಯುತ್ತಿದೆ. ಒಟ್ಟಾರೆ ಈ ನಿವೃತ್ತಿ ಸಾಕಷ್ಟು ಅನುಮಾನಕ್ಕೆ ಹಾಗೂ ಗೊಂದಲಕ್ಕೆ ಕಾರಣವಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ