Kornersite

Crime International Just In

Army Attack : ಸೇನೆಯ ದಾಳಿಗೆ 100 ಮಂದಿ ಬಲಿ!

Myanmar ಮಿಲಿಟರಿ ವೈಮಾನಿಕ ದಾಳಿಯಿಂದ (Airstrikes) ಮಧ್ಯ ಮ್ಯಾನ್ಮಾರ್‌ನಲ್ಲಿ (Myanmar) ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದನ್ನು ಇಡೀ ವಿಸ್ವವೇ ಖಂಡಿಸಿದೆ.

ಫೆ.2021ರ ದಂಗೆಯಲ್ಲಿ ಅಧಿಕಾರವನ್ನು ಮಿಲಿಟರಿ ಆಡಳಿತ ವಿಶಪಡಿಸಿಕೊಂಡಿತ್ತು. ಸದ್ಯ ಮ್ಯಾನ್ಮಾರ್ ಸಂಪೂರ್ಣವಾಗಿ ಮಿಲಿಟರಿಯ ಹಿಡಿತದಲ್ಲಿದೆ. ಹೀಗಾಗಿ ಮ್ಯಾನ್ಮರ್ ನ ಆರ್ಥಿಕತೆ (Economy) ಸಂಪೂರ್ಣವಾಗಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಅಲ್ಲಿನ ಜನ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದರು.


ವಿಶ್ವಸಂಸ್ಥೆಯ (United Nations) ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ , ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ. ಮ್ಯಾನ್ಮಾರ್ ಮಿಲಿಟರಿ ಮತ್ತೊಮ್ಮೆ ಜನರಿಗೆ ಸೂಕ್ತ ಆಡಳಿತ ಒದಗಿಸದೆ ಯುದ್ಧದ ನಡವಳಿಕೆಯಿಂದ ನಾಗರಿಕರನ್ನು ನಿರ್ಲಕ್ಷಿಸಿದೆ ಎಂದು ಟರ್ಕ್ (Turk) ಆರೋಪಿಸಿದೆ.


ಅಮೆರಿಕ (America) ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ. ಫೆಬ್ರವರಿ 2021ರ ದಂಗೆಯ ನಂತರ ಮ್ಯಾನ್ಮಾರ್ ಭೀಕರ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್ ಗೆ ಮಾನವೀಯ ಜವಾಬ್ದಾರಿಯ ಸರ್ಕಾರ ಬೇಕಿದೆ. ಭೀಕರ ಹಿಂಸಾಚಾರವನ್ನು ನಿಲ್ಲಿಸಿ ಜನರ ಅಂತರ್ಗತ ಪ್ರಜಾಪ್ರಭುತ್ವದ ಆಕಾಂಕ್ಷೆಗಳನ್ನು ಗೌರವಿಸಲು ಅಮೆರಿಕ, ಮ್ಯಾನ್ಮಾರ್ ಆಡಳಿತಕ್ಕೆ ಕರೆ ನೀಡುತ್ತೇವೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ