Kornersite

Bengaluru Just In Karnataka State

Breaking News : ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ! ಕಾಂಗ್ರೆಸ್ ಸೇರುವ ಸಾಧ್ಯತೆ!?

Belagavi : ಅಥಣಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi), ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


ಅಲ್ಲದೇ, ಅವರು ಕಾಂಗ್ರೆಸ್ (Congress) ಸೇರುವ ಸಾಧ್ಯತೆಯಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ನಾನು ಸ್ವಾಭಿಮಾನಿ. ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ ಅಸಮಾಧಾನ ಹೊರಹಾಕಿದರು.


ಕೊನೆಯವರೆಗೂ ಬಿಜೆಪಿ (BJP) ನಾಯಕರು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಿದ್ದರು. ಬಿಜೆಪಿ ಮುಖಂಡರು ನಿಷ್ಠಾವಂತ ಕಾರ್ಯಕರ್ತ. ಪಕ್ಷವನ್ನ ತಾಯಿಯ ಸ್ಥಾನದಲ್ಲಿ ಇಟ್ಟಿದ್ದೆ, ವಿಷ ಕೊಡುವುದಿಲ್ಲ ಎಂದಿದ್ದೆ. ಆದರೆ ತಾಯಿ ಕೂಡ ಭ್ರಷ್ಟಳಾಗಿದ್ದಾಳೆ ಎನ್ನುವ ಭಾವನೆ ಬರುತ್ತಿದೆ. ಅವತ್ತಿನ ಬಿಜೆಪಿ ಇಂದಿನ ಬಿಜೆಪಿಗೆ ಬಹಳ ವ್ಯತ್ಯಾಸ ಇದೆ. ತತ್ವ ಸಿದ್ಧಾಂತಗಳು ಬಿಜೆಪಿ ಪಕ್ಷದಲ್ಲಿ ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


ಪಕ್ಷದಲ್ಲಿ ನಿಷ್ಠಾವಂತರನ್ನು ದೂರ ಮಾಡುವ ಕೆಲಸ ಆರಂಭವಾಗಿದೆ. ಇದು ಪಕ್ಷದ ದೂರ ದೃಷ್ಟಿ ಇರಬಹದು ಎಂದು ನನ್ನ ಅನಿಸಿಕೆಯಾಗಿದೆ. ಭಾರತೀಯ ಜನತಾ ಪಕ್ಷದ ನಾಯಕರಿಗೆ 20 ವರ್ಷಗಳ ಕಾಲ ಸಹಕಾರ, ಆಶ್ರಯ ನೀಡಿದ್ದಕ್ಕೆ, ಪ್ರಧಾನಿ ಅವರಿಂದ ಹಿಡಿದು ಸಿಪಾಯಿವರೆಗೆ ಎಲ್ಲರೂ ಗೌರವದಿಂದ ನಡೆದುಕೊಂಡಿದ್ದಾರೆ. ನಿಮ್ಮ ಸಹಕಾರಕ್ಕೆ ಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.


ಅನಂತಕುಮಾರ ಅವರಿಗೆ ನಮನ ಸಲ್ಲಿಸುತ್ತೇನೆ. ಪ್ರಶ್ನಾತೀತ ನಾಯಕ ಆ ಒಂದು ಹಿರಿಯ ಜೀವಿಗೆ ಯಡಿಯೂರಪ್ಪ ಅವರಿಗೂ ತಲೆಬಾಗಿ ನಮಸ್ಕಾರ ಮಾಡುತ್ತೇನೆ. ಯಡಿಯೂರಪ್ಪ ಅವರಿಗೆ ವಿನಂತಿ ಮಾಡಿದ್ದೆ ನಿಮ್ಮನ್ನ ತಂದೆ ಸ್ಥಾನದಲ್ಲಿ ಇಡುತ್ತೇನೆ ಎಂದು ಹೇಳಿದ್ದೆ. ಅವರ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.


ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಸಿ.ಸಿ. ಪಾಟೀಲ್ ಹಾಗೂ ನಾನು ವಿನಂತಿ ಮಾಡಿ, ಅವರನ್ನು ಬಿಜೆಪಿಗೆ ಕರೆ ತಂದೇವು. ಅವರಿಗೆ ಎರಡನೇ ಬಾರಿಗೆ ಸಿಎಂ ಆಗುವ ಸೌಭಾಗ್ಯವಿಲ್ಲ. ಪ್ರಧಾನಿ ಆಗುವ ಯೋಗ ಅವರಿಗಿದೆ. ಬೊಮ್ಮಾಯಿ ಅವರಿಗೆ ಪ್ರಧಾನಿ ಆಗುವ ಶಕ್ತಿ ಭಗವಂತ ಕೊಡಲಿ. ಬೊಮ್ಮಾಯಿ ಅವರಿಗೆ ಪಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ