Kornersite

Bengaluru Just In Karnataka State

Breaking News: ಬಿಜೆಪಿ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ!

Hassan : ಬುಧವಾರ ರಾತ್ರಿ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಿಂದ ಕೂಡ ಬಂಡಾಯ ಭುಗಿಲೆದ್ದಿದೆ. ಅರಸೀಕೆರೆ (Araseekere Assembly Constituency 2023)ಯಿಂದ ಟಿಕೆಟ್ ಆಕಾಂಭಿಯಾಗಿದ್ದ ಎನ್.ಆರ್. ಸಂತೋಷ್‍ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎನ್.ಆರ್.ಸಂತೋಷ್ ತಮ್ಮ ಬೆಂಬಲಿಗರ ಸಭೆಯಲ್ಲಿ ಕಣ್ಣೀರು ಸುರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭ್ಯರ್ಥಿ ಎಂದು ಸಂಘಟನೆಯಲ್ಲಿ ತೊಡಗಿದ್ದ ಸಂತೋಷ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೃಹತ್ ಸಭೆ ನಡೆಸಲಾಯಿತು. ನನ್ನ ಎದುರಾಳಿ ಮಾಜಿ ಶಾಸಕ ಕೆ.ಎಂ.ಶಿವಲಿಂಗೇಗೌಡ (K M Shivalinge Gowda) ಮಾತ್ರ. ಈ ಚುನಾವಣೆಯಲ್ಲಿ ಬಿಜೆಪಿ ತೀರಾ ಕಡಿಮೆ ಮತಗಳನ್ನು ಪಡೆಯಲಿದೆ ಎಂದು ಶಪಥ್ ಮಾಡಿದ್ದಾರೆ.


ಕಳೆದ ಮೂರು ವರ್ಷಗಳಿಂದ ಅರಸೀಕೆರೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದೆ. ಆದರೆ, ಹೈಕಮಾಂಡ್ ನನಗೆ ಕೊನೆಯ ಸಮಯದಲ್ಲಿ ಟಿಕೆಟ್ ನೀಡದೆ ಮೋಸ ಮಾಡಿದೆ. ಆದರೆ ನಾನು ಮಾತ್ರ ಚುನಾವಣೆ ಕಣದಿಂದ ಹಿಂದೆ ಸರಿಯುವುದಿಲ್ಲ. ಸೋಮವಾರ 50 ಸಾವಿರ ಜನರನ್ನು ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ. ಆನಂತರ ಬೇರೆ ಪಕ್ಷದಿಂದ ಸ್ಪರ್ಧಿಸುವುದು ಅಥವಾ ಪಕ್ಷೇತರನಾಗಿ ಸ್ಪರ್ಧೆ ಮಾಡಬೇಕಾ ಎಂಬ ಕುರಿತು ತೀರ್ಮಾನಿಸುತ್ತೇನೆ ಎಂದು ಹೇಳಿದ್ದಾರೆ.


ಅಲ್ಲದೇ, ಸಂತೋಷ್ ಬೆಂಬಲಿಗರು, ಯಡಿಯೂರಪ್ಪ (BS Yediyurappa), ವಿಜಯೇಂದ್ರ (BY Vijayendra) ವಿರುದ್ಧ ಘೋಷಣೆಗಳನ್ನು ಕೂಗಿ ಕಿಡಿಕಾರಿದ್ದಾರೆ. ಜಿ.ವಿ ಬಸವರಾಜು 5 ಸಾವಿರ ಮತವನ್ನು ಕೂಡ ಪಡೆಯುವುದಿಲ್ಲ. ಅಂತಹ ವ್ಯಕ್ತಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ ಎದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಂದೆ – ಮಗ ಸೇರಿಕೊಂಡು ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಹಾಳು ಮಾಡಿದ್ದಾರೆ. ನಾನು ಎನ್.ಆರ್ ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ನಾಳೆ ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ ಎಂದು ಎನ್.ಆರ್.ಸಂತೋಷ್ ಬೆಂಬಲಿಗ ರಂಗನಾಥ್ ಎಂಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ