Kornersite

Bengaluru Just In Karnataka State

Breaking News: ನಾನು ಏನು ತಪ್ಪು ಮಾಡಿದ್ದೆ? ಪಕ್ಷದ ವಿರುದ್ಧ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ ಸವದಿ!

Chikkodi : ನಾನು ಯಾರನ್ನಾದರೂ ರೇಪ್ ಮಾಡಿದ್ನಾ? ನನ್ನನ್ನು ಯಾವ ಕಾರಣಕ್ಕೆ ಡಿಸಿಎಂ ಸ್ಥಾನದಿಂದ ತೆಗೆದಿರಿ? ಯಾವ ಅಪರಾಧದ ಮೇಲೆ ತೆಗೆದು ಹಾಕಿದರು ಎನ್ನುವುದೇ ತಿಳಿಯಲಿಲ್ಲ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ (Laxman Savadi) ಅಸಮಾಧಾನ ವ್ಯಕ್ತಪಡಿಸಿದರು.


ಸೋತರೂ ಡಿಸಿಎಂ ಮಾಡಲಾಗಿತ್ತು. ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಬಿಜೆಪಿ (BJP) ನಾಯಕರ ಮಾತಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಸ್ಥಾನ ಕೊಡಬೇಕೆಂದು ನಾನು ಕೇಳಿದ್ದಿಲ್ಲ. ಮೊದಲು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಬಿಡುವ ನನ್ನ ನಿರ್ಧಾರ ಅಚಲ. ಅದನ್ನು ಪ್ರಕಟ ಮಾಡುವ ಪೂರ್ವದಲ್ಲಿ ಏನು ಹೇಳಲ್ಲ. ಪಕ್ಷದಿಂದ ಹೊರಗೆ ಬಂದು ತೀರ್ಮಾನ ಮಾಡುವೆ ಎಂದು ಹೇಳಿದ್ದಾರೆ.


ಬೊಮ್ಮಾಯಿ ಅವರು ಹಳೆ ಸ್ನೇಹಿತರು. ಅವರೊಂದು ಪಕ್ಷ, ನಾನೊಂದು ಪಕ್ಷದಲ್ಲಿ ಇದ್ದೆವು. ಅವರ ವಿಚಾರಧಾರೆ ಬೇರೆ ನನ್ನ ವಿಚಾರಧಾರೆ ಬೇರೆ ಆಗಿತ್ತು. ಆನಂತರ ಒಂದೇ ಪಕ್ಷದಲ್ಲಿ ಒಟ್ಟಾಗಿ, ನಾನು ಅವರು ಸಚಿವರಾಗಿ ಕೂಡಿ ಕೆಲಸ ಮಾಡಿದ್ದೇವೆ. ಅನೇಕ ಮುಖಂಡರು ನನ್ನ ನಿರ್ಲಕ್ಷ್ಯ ಮಾಡಿದ್ದಕ್ಕೆ ಬೇಸರವಾಗಿದೆ ಎಂದು ಹೇಳಿದ್ದಾರೆ.


ಟಿಕೆಟ್ ತಪ್ಪಿದ್ದಕ್ಕೆ ಪಕ್ಷ ಬಿಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಕಾರಣ ಅನಿಸುತ್ತದೆ. ಆದರೆ ನನಗಾಗಿರುವ ನೋವು, ಹಿಂಸೆ ಬಹಳಷ್ಟು ಇದೆ. ಆಂತರಿಕ ಹಿಂಸೆಗಳು ಜಿಲ್ಲೆ, ರಾಜ್ಯದಲ್ಲಿ ಅನುಭವಿಸಿರುವೆ. ನನ್ನ ಪಕ್ಷ ತಾಯಿ ಎಂದು ತಿಳಿದು ಸುಮ್ಮನಿದ್ದೆ. ರಾಷ್ಟ್ರೀಯ ನಾಯಕರು ಬಂದಾಗ ವೇದಿಕೆ ಹಂಚಿಕೊಳ್ಳಲು ಆಗಿಲ್ಲ. ನನ್ನ ನೋವು ತಡೆದುಕೊಂಡು ಬಂದಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ