Kornersite

Bengaluru Just In Karnataka State

Breaking News:ಮತ್ತೆ ಜೆಡಿಎಸ್ ಸೇರಿದ ವೈಎಸ್ ವಿ ದತ್ತಾ!

Chikkamagaluru : ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮತ್ತೆ ಮರಳಿ ಜೆಡಿಎಸ್ (JDS) ಸೇರಿದ್ದಾರೆ. ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ.


ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ನೀಡಿ ಮಾತುಕತೆ ನಡೆಸಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ. ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಈ ಸಂದರ್ಭದಲ್ಲಿ ರೇವಣ್ಣ ಘೋಷಿಸಿದ್ದಾರೆ.


ದತ್ತ ಅವರು ಇದೇ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ದತ್ತ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಟಿಕೆಟ್ ನೀಡಲಿಲ್ಲ. ಹೀಗಾಗಿ ಬೇಸರಗೊಂಡು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ ನಲ್ಲಿ ಕೂಡ ಅವರಿಗೆ ಟಿಕೆಟ್ ಸಿಗಲಿಲ್ಲ. ಈಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದ ದತ್ತ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಈಗ ಮತ್ತೆ ಕಾಂಗ್ರೆಸ್ ಬಿಟ್ಟು ಜೆಡಿಎಸ್‌ ಗೆ ಮರಳಿದ್ದಾರೆ. ಇದರಿಂದಾಗಿ ಜೆಡಿಎಸ್ ಗೆ ಬಲ ಬಂತಂದಾಗಿದೆ ಎಂದು ಹೇಳಿದ್ದಾರೆ.


ದತ್ತಾ ಅವರು ಜೆಡಿಎಸ್ ಸೇರುವ ಕುರಿತು ಬುಧವಾರ ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ದತ್ತ ಮನೆಗೆ ರೇವಣ್ಣ, ಪ್ರಜ್ವಲ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದತ್ತಾ ಅವರ ಸ್ಪರ್ಧೆಯನ್ನು ಖಚಿತಪಡಿಸಿದರು. ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ನಿಂದ ಧನಂಜಯ್ ಅವರನ್ನು ಅಧಿಕೃತಗೊಳಿಸಲಾಗಿತ್ತು. ಆದರೆ, ಈಗ ಧನಂಜಯ್ ಅವರಿಗೆ ಕೊಕ್ ನೀಡಲಾಗಿದೆ. ದತ್ತ ಅವರಿಗೆ ಟಿಕೆಟ್ ಎಂದು ಘೋಷಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ