Chikkamagaluru : ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮತ್ತೆ ಮರಳಿ ಜೆಡಿಎಸ್ (JDS) ಸೇರಿದ್ದಾರೆ. ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ.

ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ನೀಡಿ ಮಾತುಕತೆ ನಡೆಸಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ. ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಈ ಸಂದರ್ಭದಲ್ಲಿ ರೇವಣ್ಣ ಘೋಷಿಸಿದ್ದಾರೆ.

ದತ್ತ ಅವರು ಇದೇ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ದತ್ತ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಟಿಕೆಟ್ ನೀಡಲಿಲ್ಲ. ಹೀಗಾಗಿ ಬೇಸರಗೊಂಡು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್ ನಲ್ಲಿ ಕೂಡ ಅವರಿಗೆ ಟಿಕೆಟ್ ಸಿಗಲಿಲ್ಲ. ಈಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದ ದತ್ತ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಈಗ ಮತ್ತೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಗೆ ಮರಳಿದ್ದಾರೆ. ಇದರಿಂದಾಗಿ ಜೆಡಿಎಸ್ ಗೆ ಬಲ ಬಂತಂದಾಗಿದೆ ಎಂದು ಹೇಳಿದ್ದಾರೆ.

ದತ್ತಾ ಅವರು ಜೆಡಿಎಸ್ ಸೇರುವ ಕುರಿತು ಬುಧವಾರ ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ದತ್ತ ಮನೆಗೆ ರೇವಣ್ಣ, ಪ್ರಜ್ವಲ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದತ್ತಾ ಅವರ ಸ್ಪರ್ಧೆಯನ್ನು ಖಚಿತಪಡಿಸಿದರು. ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ನಿಂದ ಧನಂಜಯ್ ಅವರನ್ನು ಅಧಿಕೃತಗೊಳಿಸಲಾಗಿತ್ತು. ಆದರೆ, ಈಗ ಧನಂಜಯ್ ಅವರಿಗೆ ಕೊಕ್ ನೀಡಲಾಗಿದೆ. ದತ್ತ ಅವರಿಗೆ ಟಿಕೆಟ್ ಎಂದು ಘೋಷಿಸಿದ್ದಾರೆ.