Kornersite

Bengaluru Just In Karnataka State

Exclusive Story : ರಾಜಕೀಯ ನಿವೃತ್ತಿ ಪಡೆದ ಮತ್ತೊಬ್ಬ ಹಿರಿಯ ನಾಯಕ!

Mysore: ಇತ್ತೀಚೆಗಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತಾನೆ ಎಂಬುವುದನ್ನು ನಾನು ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರಿಗೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ. ಉದ್ದೇಶಪೂರ್ವಕವಾಗಿ ಟಿಕೆಟ್‌ ತಪ್ಪಿಸಿದ್ದಾರೆ. ರಾಜಕಾರಣದಲ್ಲಿ ನನ್ನ ಬೆಳವಣಿಗೆ ಸಹಿಸಲಾರದೆ ತಪ್ಪಿಸಿದ್ದಾರೆ. ಮುಖ್ಯಮಂತ್ರಿ ಮಾಡಿದ ಹಗರಣವನ್ನು ಬಯಲಿಗೆ ಎಳೆಯುತ್ತೇನೆ.‌ ಆತ ಮಾಡಿದ ಘನಕಾರ್ಯವನ್ನು ಜನರ ಮುಂದೆ ಇಡುತ್ತನೆ. ಸೂಕ್ತ ತನಿಖೆ‌ ಮಾಡಿಸುತ್ತೇನೆ. ಹಿಂದಿನ ಭಾರಿ ಸಹ ಟಿಕೆಟ್ ತಪ್ಪಿಸಲು ಓಡಾಡಿದ್ದರು ಎಂದು ಆರೋಪಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ