Kornersite

Bengaluru Just In Karnataka State

Karnataka Assembly Election: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ; ಮತ್ತೆ 7 ಜನ ಹಾಲಿ ಶಾಸಕರಿಗೆ ಟಿಕೆಟ್ ಮಿಸ್!

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ(BJP)ಯು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ(First List) ನ್ನು ಮಂಗಳವಾರ ಬಿಡುಗಡೆ ಮಾಡಿತ್ತು. ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 23 ಜನರಿಗೆ ಟಿಕೆಟ್ ಘೋಷಿಸಿದೆ.


ಎರಡನೇ ಪಟ್ಟಿಯಲ್ಲಿಯೂ ಮೈಸೂರಿನ ಕೆ.ಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್.ಎ. ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನ ಮಾಡಿದ್ದರು. ಎರಡನೇ ಪಟ್ಟಿಯಲ್ಲಿಯೂ ಕೂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕಂಡು ಬಂದಿಲ್ಲ. ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ


ದೇವರ್ ಹಿಪ್ಪರಗಿ – ಸೋಮನಗೌಡ ಪಾಟೀಲ್ (ಸಾಸನೂರು)
ಬಸವನ ಬಾಗೇವಾಡಿ – ಎಸ್ಕೆ ಬೆಳ್ಳುಬ್ಬಿ
ಇಂಡಿ – ಕಾಸಗೌಡ ಬಿರದಾರ್ಗು
ಗುರುಮಿಟ್ಕಲ್ – ಲಲಿತ ಅನಾಪುರ್ಬೀ
ಬೀದರ್ – ಈಶ್ವರ್ ಸಿಂಗ್ ಠಾಕೂರ್
ಬಾಲ್ಕಿ- ಪ್ರಕಾಶ್ ಖಂಡ್ರೆ
ಗಂಗಾವತಿ – ಪ್ರಸನ್ನ ಮುನವಳ್ಳಿ
ಕಲಘಟಗಿ – ನಾಗರಾಜ್ ಛಬ್ಬಿ
ಹಾನಗಲ್ – ಶಿವರಾಜ್ ಸಜ್ಜನರ್
ಹಾವೇರಿ (ಎಸ್ಸಿ) – ಗವಿಸಿದ್ದಪ್ಪ ದ್ಯಾಮಣ್ಣನವರ್
ಹರಪ್ಪನಹಳ್ಳಿ – ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ – ಲೋಕಿಕೆರೆ ನಾಗರಾಜ್
ದಾವಣಗೆರೆ ದಕ್ಷಿಣ – ಅಜಯ್ ಕುಮಾರ್
ಮಾಯಕೊಂಡ (ಎಸ್ಸಿ) – ಬಸವರಾಜ ನಾಯ್ಕ್
ಚನ್ನಗಿರಿ – ಶಿವಕುಮಾರ್
ಬೈಂದೂರು – ಗುರುರಾಜ್ ಗಂಟಿಹೊಳೆ
ಮೂಡಿಗೆರೆ (ಎಸ್ಸಿ) – ದೀಪಕ್ ದೊಡ್ಡಯ್ಯ
ಗುಬ್ಬಿ – ಎಸ್ಡಿ ದಿಲೀಪ್ ಕುಮಾರ್
ಶಿಡ್ಲಘಟ್ಟ – ರಾಮಚಂದ್ರ ಗೌಡ
ಕೆಜಿಎಫ್ (ಎಸ್ಸಿ) – ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ- ಚಿದಾನಂದ
ಅರಸಿಕೆರೆ- ಜಿವಿ ಬಸವರಾಜು
ಹೆಗ್ಗಡದೇವನಕೋಟೆ- ಕೃಷ್ಣ ನಾಯ್ಕ್


ಎರಡನೇ ಪಟ್ಟಿಯಲ್ಲಿ 7 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ. ಶೆಟ್ಟರ್ ಕ್ಷೇತ್ರದ ಅಭ್ಯರ್ಥಿ ಬಾಕಿ ಇರಿಸಲಾಗಿದೆ. ಕಲಘಟಗಿ ಹಾಲಿ ಶಾಸಕ ನಿಂಬಣ್ಣವರಿಗೆ ಟಿಕೆಟ್ ಮಿಸ್ ಆಗಿದೆ. ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್‌ ಘೊಷಣೆಯಾಗಿಲ್ಲ. ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆ ಕ್ಷೇತ್ರಕ್ಕೆ ಎಸ್ಡಿ ದಿಲೀಪ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್ ಮಿಸ್ ಆಗಿದೆ. ಬಿಎಸ್‌ವೈ ಸಂಬಂಧಿ ಎನ್‌.ಆರ್‌.ಸಂತೋಷ್‌ ಅವರಿಗೂ ಟಿಕೆಟ್ ನೀಡಿಲ್ಲ. ಅವರು ಅರಸೀಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ