Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಉತ್ತಮ ವಾತಾವರಮ ಇದೆ. ಈ ಭಾಗದಲ್ಲಿ ಸುಮಾರು 30 ರಿಂದ 40 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದ್ದಾರೆ.

ಮಾಜಿ ಶಾಸಕ ವೈ.ಎಸ್.ವಿ ದತ್ತಾ (Y.S.V.Datta) ನನ್ನ ಜೊತೆ ಸಂಪರ್ಕದಲ್ಲಿಲ್ಲ. ಅವರು ಶಾಸಕರಿದ್ದಾಗಲೂ ನನ್ನ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ನಾಳೆ ಬೆಳಿಗ್ಗೆ ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಬಿಡುಗಡೆ ಮಾಡಲು ಮಾನಸಿಕವಾಗಿ ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಹಾಸನದಲ್ಲಿ (Hassan) ಟಿಕೆಟ್ ಕುರಿತು ಮಾತನಾಡಿದ ಅವರು, ಹಾಸನದ ಗೊಂದಲವನ್ನು ನಾವು ಬಗೆಹರಿಸುತ್ತೇವೆ. ನನ್ನ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂಚರತ್ನ ಯಾತ್ರೆಯಲ್ಲಿ ಏಳೆಂಟು ಕ್ಷೇತ್ರಗಳ ಬಗ್ಗೆ ಅಭ್ಯರ್ಥಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಈ ಬಾರಿ ನಾವು 120 ಸ್ಥಾನ ದಾಟಲೇಬೇಕು ಎಂದು ಪಣತೊಟ್ಟಿದ್ದೇವೆ ಎಂದರು.

ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಸಿಎಂ ಮಾಡುವುದಾಗಿ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆಯವರಿಗೆ ಅವಕಾಶ ಸಿಕ್ಕಾಗಲೇ ಸಿಎಂ ಮಾಡಲಿಲ್ಲ. ಈಗ ಏನು ಮಾಡುತ್ತಾರೆ? ದೇವೇಗೌಡರು (H.D.Deve Gowda) ಆವಾಗಲೇ ಖರ್ಗೆಯವರನ್ನು ಸಿಎಂ ಮಾಡಿ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.