Chitradurga : ಬಿಜೆಪಿ (BJP) ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಪೊಲೀಸರನ್ನು (Police) ವರ್ಗಾವಣೆ (Transfer) ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್ ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಇವರೆಲ್ಲ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಪರ ಕೆಲಸ ಮಾಡಿದ್ದರು ಎಂಬ ಆರೋಪ ಹೊತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ಅವರು ಈ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ನಾಲ್ವರು ಪೊಲೀಸರನ್ನು ವರ್ಗಾವಣೆಗೊಳಿಸಿ ಎಸ್ಪಿ ಕೆ.ಪರಶುರಾಮ್ ಆದೇಶ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ವೀರೇಶ್, ಶಿವಾನಂದ್, ತಾ.ಪಂ. ಕಚೇರಿಯ ಹರ್ಷವರ್ಧನ ವಿರುದ್ಧವೂ ದೂರು ನೀಡಲಾಗಿದೆ.