Kornersite

Beauty Extra Care Just In Lifestyle

Summer Tips: ಬಿಸಿಲು-ಬಿಸಿಲು ಸಿಕ್ಕಾಪಟ್ಟೆ ಬಿಸಿಲು: ಈ 15 ಟಿಪ್ಸ್ ಮಿಸ್ ಮಾಡದೇ ಫಾಲೋವ್ ಮಾಡಿ

ಅಬ್ಬಾ ಎಷ್ಟು ಬಿಸಿಲು (summer)..ಅಯ್ಯೋ ಸ್ವಲ್ಪ ಹೊರಗೆ ಹೋದ್ರೆ ಸಾಕು ಸುಸ್ತು..ಎಷ್ಟು ನೀರು(water) ಕುಡಿದ್ರು ಸಾಕಾಗ್ತಾ ಇಲ್ಲ..ಸಾಕಪ್ಪ ಸಾಕು..ಏನ್ ಉರಿ ಬಿಸಿಲು ಇದು…ಸ್ಕಿನ್ (skin)ಸುಟ್ಟು ಹೊಗ್ತಾ ಇದೆ..ಹೀಗೆ ಎಲ್ಲರ ಬಾಯಲ್ಲೂ ಇದೇ ರೀತಿ ಮಾತುಗಳು ಕೇಳಿ ಬರ್ತಾ ಇವೆ. ಯಾಕಂದ್ರೆ ಈ ವರ್ಷ ರಾಜ್ಯಾದ್ಯಂತ ಹಿಂದೆಂದೂ ಕಾಣದ ಸೂರ್ಯನ ಶಾಖ ಹೆಚ್ಚಾಗಿದೆ.

ಕಳೆದ ತಿಂಗಳಿಂದ ಅಂದ್ರೆ ಮಾರ್ಚ್ ನಿಂದ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗ್ತಾನೆ ಇದೆ. ಇನ್ನು ಸೂರ್ಯನ ಈ ಪ್ರಖರತೆ ಜೂನ್ ಎರಡನೇ ವಾರದವರೆಗೂ ಮುಂದುವರೆಯಲಿದೆ. ಸೋ ನಾವು ಕೆಲವೊಂದು ಟಿಪ್ಸ್ (tips) ಫಾಲೋವ್ ಮಾಡಿದ್ರೆ ಆರೋಗ್ಯ ಹಾಗೂ ಸೌದರ್ಯ ಎರಡನ್ನು ಕಾಪಾಡಿಕೊಳ್ಳಬಹುದು. ಇಲ್ಲವಾದರೆ ವಯಸ್ಸಾದವರು ಹಾಗೂ ಮಕ್ಕಳ ಜೀವಕ್ಕೆ ಅಪಾಯವಿದೆ.

ಇಲ್ಲಿವೆ ಸೂರ್ಯನ ಶಾಖದಿಂದ ಎಚ್ಚರದಿಂದ ಇರಲು 15 ಟಿಪ್ಸ್:

1) ಹೊರಗಡೆ ಹೋಗುವವರು ಆದಷ್ಟು ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ನಿಮ್ಮ ಕೆಲಸವನ್ನ್ ಮುಗಿಸಿಕೊಳ್ಳಿ

2) ಬಿಸಿಲಿನಲ್ಲಿ ಹೊರ ಹೋಗಲೇಬೇಕಾದ ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿಯನ್ನು ಬಳಸಿ

3) ಬಿಸಿಲಿನ ಪ್ರಖರತೆಯನ್ನು ಕಪ್ಪು ಮತ್ತು ನೀಲಿ ಬಣ್ಣ ಬೇಗ ಹೀರುವುದರಿಂದ ಕಪ್ಪು ಮತ್ತು ನೀಲಿ ಬಣ್ಣದ ಬಟ್ಟೆಗಳನ್ನು ಅವೈಡ್ ಮಾಡಿ

4) ಸಾಧ್ಯವಾದಷ್ಟು ಕಾಟನ್ ಬಟ್ಟೆಗಳನ್ನು ಧರಿಸಿ

5) ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ನೀರು ಕುಡಿಯಲು ಕೊಡಿ

6) ಈ ಬಿಸಿಲಿನಲ್ಲಿ ವಿಟಮಿನ್ “ಸಿ” ಕೊರತೆ ಎದುರಾಗುವುದರಿಂದ ನಿಂಬೆಹಣ್ಣಿನ ಪಾನಕ ಮಾಡಿಕೊಂಡು ಕುಡಿಯಿರಿ. ಜೊತೆಗೆ ಸಕ್ಕರೆ ಬದಲು ಬೆಲ್ಲವನ್ನು ಬಳಸಿ

7) ಬೆಳಗ್ಗೆ ಎದ್ದ ತಕ್ಷಣ “ತುಳಸಿ” ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯಿರಿ. ಇದರಿಂದ ಕೆಲಸ ಮಾಡುವಾಗ ಸುಸ್ತಾಗುವುದಿಲ್ಲ

8 ) ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬೇಡಿ. ಇಲ್ಲವಾದರೆ ಗುದದ್ವಾರದಲ್ಲಿ ಉಷ್ಣತೆ ಹೆಚ್ಚಾಗಿ ಮಲವಿಸರ್ಜನೆಗೆ ತೊಂದರೆ ಜೊತೆಗೆ ಪೈಲ್ಸ್ ಬರುವ ಸಾಧ್ಯತೆ ಹೆಚ್ಚು

8 ) ಈ ಸಮಯದಲ್ಲಿ ತಲೆ ಮತ್ತು ಮೆದುಳು ತಂಪಾಗಿರಬೇಕು ಆದ್ದರಿಂದ ಮಕ್ಕಳಿಗೆ ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ “ಹರಳೆಣ್ಣೆ” ಹಚ್ಚಿ ಬೆಳಗ್ಗೆ ಸ್ನಾನ ಮಾಡಿಸಿ

9) ಮನೆಯಿಂದ ಹೊರಗೆ ಹೋಗುವಾಗ ಮಿಸ್ ಮಾಡದೇ ಸನ್ ಸ್ಕ್ರೀನ್ ಲೋಶನ್ ಹಚ್ಚಿಕೊಳ್ಳಿ

10) ಹೆಸರು ಕಾಳುಗಳನ್ನು ನೀರಿನಲ್ಲಿ ಅರ್ಧ ಗಂಟೆಯಷ್ಟು ನೆನಸಿಟ್ಟು ನಂತರ ಮಿಕ್ಸಿಯಲ್ಲಿ ಜ್ಯೂಸ್ ಮಾಡಿಕೊಂಡು ದಿನಕ್ಕೆರಡು ಬಾರಿ ಕುಡಿಯಿರಿ ಇದರಿಂದ ದೇಹ ತಂಪಾಗಿರುತ್ತದೆ

11 ) ಬಾಣಂತಿ ಹೆಣ್ಣು ಮಕ್ಕಳು ಕಾಯಿಸಿ ಆರಿಸಿದ ನೀರನ್ನೇ ಕುಡಿಯಬೇಕು

12) ಈ ಸಮಯದಲ್ಲಿ ಮೊಸರಿನ ಬದಲು ಕಡೆದ ಮಜ್ಜಿಗೆಯನ್ನು ಆಹಾರಕ್ಕೆ ಬಳಸಿ,ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವುದರಿಂದ ಅಸಿಡಿಟಿ ಆಗುವುದಿಲ್ಲ

13) 5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು ಇದರಿಂದ ಮಕ್ಕಳನ್ನು Dehydration ನಿಂದ ಕಾಪಾಡಿಕೊಳ್ಳಬಹುದು

14) ಈ ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಕ್ಷೇಮ, ದಿನಕ್ಕೆರಡು ಬಾರಿ ಅಂದರೆ ಸಂಜೆ ಅಥವಾ ರಾತ್ರಿ ಮಲಗುವ ಮುನ್ನ ಒಂದು ಬಕೆಟ್ ತಣ್ಣೀರಿಗೆ ಕನಿಷ್ಠ 10 ಪುದಿನ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ತಣ್ಣೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಬೆವರಿನ ದುರ್ಗಂಧ ದೂರವಾಗುವುದಲ್ಲದೇ ಬೆವರು ಗುಳ್ಳೆಗಳು ಚರ್ಮದ ಮೇಲೆ ಬರುವುದಿಲ್ಲ

15) ಬಿಗಿಯಾದ ಒಳ ಉಡುಪುಗಳನ್ನು ಬಳಸಬೇಡಿ. ಇದರಿಂದ ರಕ್ತ ಸಂಚಾರಕ್ಕೆ ತೊಂದರೆಯಾಗುತ್ತದೆ

You may also like

Extra Care Lifestyle

ಊಟ ಆದ್ಮೇಲೆ ಯಾವುದೇ ಕಾರಣಕ್ಕೂ ಈ ಕೆಲಸ ಮಾಡಬೇಡಿ

ನಾವು ಊಟಕ್ಕೆ ಎಷ್ಟು ಮಹತ್ವ ಕೊಡುತ್ತೇವೆ ಅಷ್ಟೇ ಪ್ರಾಮುಖ್ಯತೆಯನ್ನು ಊಟ(Food) ಆದ್ಮೇಲೆ ಏನು ಮಾಡ್ತೀವಿ ಅನ್ನೋದು ಮುಖ್ಯ. ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭ್ಯಾಸ(Habbit) ಇರುತ್ತದೆ. ಕೆಲವರು ಊಟ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ