Lucknow : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ.

ಕಾರಿನಲ್ಲಿದ್ದ ಇನ್ನೂ 8 ಜನ ತೀವ್ರವಾಗಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ.

ವಾಹನದಲ್ಲಿದ್ದ ಪ್ರಯಾಣಿಕರು ಸಭೆಯಲ್ಲಿ ಭಾಗವಹಿಸಲು ಲುಧಿಯಾನದಿಂದ (Ludhiana) ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅಪಘಾತದಲ್ಲಿ ಪ್ರಾಣಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.