Kornersite

Bengaluru Just In Karnataka State

Breaking News: ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡುವವರು ಯಾರು?

ಹಾವೇರಿ : ಇಂದು ಕಾಂಗ್ರೆಸ್‌ (Congress) ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿದೆ.

ಆರಂಭದಲ್ಲಿ ಶಿಗ್ಗಾವಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ಆದರೆ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಟಿಕೆಟ್‌ ನೀಡಲಾಗಿದೆ.


ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ನಾಯಕರ ಮಧ್ಯೆ ಅಸಮಾಧಾನವಿದ್ದು, ಈ ಅಸಮಾಧಾನವನ್ನು ಶಮನ ಮಾಡಲು ಕಾಂಗ್ರೆಸ್‌ ಈಗ ಮುಂದಾಗಿದೆ. ಅಲ್ಲದೇ, ಕಾಂಗ್ರೆಸ್ ಶಿಗ್ಗಾವಿಯನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಸಿಎಂರನ್ನು ಸೋಲಿಸಲೇಬೇಕು ಎಂಬ ಹಠದೊಂದಿಗೆ ಓಡಾಡುತ್ತಿತ್ತು. ಆದರೆ, ಇನ್ನೂ ಪಟ್ಟಿ ಬಿಡುಗಡೆ ಮಾಡದೆ, ಇನ್ನೂ ಗೊಂದಲದಲ್ಲಿಯೇ ಉಳಿದಿದೆ ಎನ್ನಲಾಗುತ್ತಿದೆ.


ಪಂಚಮಸಾಲಿ ಅಥವಾ ಮುಸ್ಲಿಂ ಸಮುದಾಯದ ಪೈಕಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುವುದರ ಕುರಿತು ಕೈ ನಾಯಕರ ಮಧ್ಯೆ ಭಾರೀ ಚರ್ಚೆಯಾಗುತ್ತಿದೆ. ಹೀಗಾಗಿ ನಾಲ್ಕನೇ ಪಟ್ಟಿಯಲ್ಲಿ ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಪ್ರಕಟವಾಗುವ ಸಾಧ್ಯತೆಯಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ