Kornersite

Just In Sports

IPL 2023; ವಿರಾಟ್ ಆರ್ಭಟ; ಡೆಲ್ಲಿ ಧೂಳಿಪಟ!

Bangalore : ಆರ್ ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಸೋಲು ಕಾಣುವುದರ ಮೂಲಕ ಡೆಲ್ಲಿ (Delhi Capitals)ತಂಡವು ಸತತ 5ನೇ ಸೋಲು ಕಂಡಿದೆ. ವಿರಾಟ್‌ ಕೊಹ್ಲಿ (Virat Kohli) ಅರ್ಧ ಶತಕದ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 23 ರನ್‌ ಭರ್ಜರಿ ಜಯ ಸಾಧಿಸಿದೆ.

ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಉತ್ತಮ ರನ್‌ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. 175 ರನ್‌ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 151 ರನ್‌ಗಳಿಸಿ ಸತತ 5ನೇ ಸೋಲು ಕಂಡಿತು.


ಕ್ಯಾಪಿಟಲ್ಸ್‌ ತಂಡದ ಅಗ್ರಕ್ರಮಾಂಕದ ಬ್ಯಾಟ್ಸ್‌ ಮನ್ ಗಳು ಆರ್‌ಸಿಬಿ ಬೌಲರ್‌ಗಳ ದಾಳಿಗೆ ಬೆಂಡಾದರು. ಪೃಥ್ವಿ ಶಾ, ಮಿಚೆಲ್‌ ಮಾರ್ಷ್‌ ಶೂನ್ಯಕ್ಕೆ ಔಟಾದರೆ, ಯಶ್‌ ಧುಲ್‌ ಕೇವಲ 1 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ನಾಯಕ ಡೇವಿಡ್‌ ವಾರ್ನರ್‌ (David Warner) 19 ರನ್‌, ನಿಷ್‌ ಪಾಂಡೆ (Manish Pandey) 50 ರನ್‌, ಅಕ್ಷರ್‌ ಪಟೇಲ್‌ (Axar Pate) 21 ರನ್‌, ಅಮನ್‌ ಹಕೀಮ್‌ ಖಾನ್‌ 18 ರನ್‌ ಹಾಗೂ ಅಭಿಷೇಕ್ ಪೊರೆಲ್ ಕೇವಲ 5ರನ್‌ ಗಳಿಸಿದರು.


ಬೆಂಗಳೂರು ಪರ ವಿಜಯಕುಮಾರ್ ವೈಶಾಕ್ 3, ಮೊಹಮ್ಮದ್‌ ಸಿರಾಜ್‌ 2, ವೇಯ್ನ್ ಪಾರ್ನೆಲ್, ವಾನಿಂದು ಹಸರಂಗ (Wanindu Hasaranga) ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ ಮತ್ತು ಫಾಫ್‌ ಡು ಪ್ಲೆಸಿಸ್‌ ಆರಂಭದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದರು. ವಿರಾಟ್‌ 34 ಎಸೆತಗಳಲ್ಲಿ 50 ರನ್ ಸಿಡಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ 24 ರನ್ ಗಳಿಸಿದರು. ಹರ್ಷಲ್‌ ಪಟೇಲ್‌ 6 ರನ್‌, ಅನುಜ್ ರಾವತ್ 15 ರನ್‌ ಗಳಿಸಿದರೆ, ಶಹಬಾಜ್‌ ಅಹ್ಮದ್‌ 20 ರನ್‌ ಗಳಿಸಿ ಅಜೇಯರಾಗುಳಿದರು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಮಿಚೆಲ್ ಮಾರ್ಷ್ 2, ಯಾದವ್ 2, ಅಕ್ಷರ್ ಪಟೇಲ್ ಮತ್ತು ಲಲಿತ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್