Kornersite

International Just In

Exclusive Story: ಅಬ್ಬಾ!! ಜೀವಂತ ವ್ಯಕ್ತಿಯನ್ನೇ ತಿಂದು ಮುಗಿಸಿದ ಕೀಟಗಳು!

Washington : ಸಿನಿಮಾಗಳಲ್ಲಿ ಕೀಟಗಳು ಮನುಷ್ಯನನ್ನು ಭೀಕರವಾಗಿ ತಿಂದು ತೇಗಿರುವುದನ್ನು ನಾವು ನೋಡಿರುತ್ತೇವೆ. ಅದೇ ರೀತಿ ಸಿನಿಮೀಯ ಮಾದರಿಯಲ್ಲಿ ಕೀಟಗಳು ಮತ್ತು ತಿಗಣೆ ಕೈದಿಯೊಬ್ಬನನ್ನು ಜೀವಂತವಾಗಿ ತಿಂದುಹಾಕಿರುವ ಭಯಾನಕ ಘಟನೆ ನಡೆದಿದೆ.


ಅಮೆರಿಕದ ಅಟ್ಲಾಂಟಾದ ಜೈಲಿನಲ್ಲಿದ್ದ (US Atlanta Jail) 35 ವರ್ಷದ ಕೈದಿಯೊಬ್ಬನನ್ನು ಕೀಟಗಳು ಮತ್ತು ತಿಗಣೆ ತಿಂದು ಹಾಕಿವೆ ಎಂಬ ಆರೋಪ ಕೇಳಿ ಬಂದಿದ್ದು, ಸಂತ್ರಸ್ತರ ಕುಟುಂಬದ ವಕೀಲರು ಆರೋಪಿಸಿದ್ದಾರೆ. ಯುಎಸ್ ಪೊಲೀಸರ (US Police) ಪ್ರಕಾರ, 2022ರ ಜೂನ್ 12 ರಂದು ಲಾಶಾನ್ ಥಾಂಪ್ಸನ್ ಎಂಬ ವ್ಯಕ್ತಿಯನ್ನು ಅಟ್ಲಾಂಟಾದಲ್ಲಿ ಬಂಧಿಸಿ, ಫುಲ್ಟನ್ ಕೌಂಟಿ ಜೈಲಿಗೆ ಕರೆದೊಯ್ಯಲಾಗಿತ್ತು. ಆದರೆ ವಿಚಾರಣೆಯ ನಂತರ ಆತನನ್ನ ಮಾನಸಿಕ ಅಸ್ವಸ್ಥ ಎಂದು ಪರಿಗಣಿಸಿ ಮನೋವೈದ್ಯಕೀಯ ವಿಭಾಗದಲ್ಲಿ ಇರಿಸಲಾಗಿತ್ತು. ಪೊಲೀಸರು ಸಿಆರ್‌ಪಿಸಿ ಅನ್ವಯ ತನಿಖೆ ಪ್ರಕ್ರಿಯೆ ಆರಂಭಿಸಿದ್ದರು. ಆತನ ಹೇಳಿಕೆ ಪಡೆಯಲು 2022ರ ಸೆಪ್ಟೆಂಬರ್ 13ರಂದು ಹೋದಾಗ ಥಾಂಪ್ಸನ್ ಪ್ರತಿಕ್ರಿಯಿಸಲಿಲ್ಲ. ನಂತರ 3 ತಿಂಗಳ ನಂತರ ಆತ ಕೊಠಡಿಯಲ್ಲಿಯೇ ಸಾವನ್ನಪ್ಪಿರುವುದು ತಿಳಿದು ಬಂದಿದೆದ.


ಈ ಕುರಿತು ಪ್ರತಿಕ್ರಿಯಿಸಿರುವ ಸಂತ್ರಸ್ತ ಕುಟುಂಬ ಪರ ವಕೀಲರು, ಥಾಂಪ್ಸನ್ ಅವರನ್ನ ಕೊಳಕು ತುಂಬಿದ ಕೋಣೆಯಲ್ಲಿ ಇರಿಸಲಾಗಿತ್ತು. ಹೀಗಾಗಿ ತಾನು ಮಲಗುತ್ತಿದ್ದ ಹಾಸಿಗೆಯಲ್ಲಿ ಕೀಟಗಳು ಹೆಚ್ಚಾಗಿ, ಮೂರು ತಿಂಗಳ ನಂತರ ಕೀಟಗಳಿಂದ ಜೀವಂತವಾಗಿ ತಿನ್ನಲ್ಪಟ್ಟಿದ್ದಾನೆ. ಇದಕ್ಕೆ ಯಾರು ಹೊಣೆಗಾರರು ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಉನ್ನತ ಮೂಲದ ಅಧಿಕಾರಿಗಳು ಪೂರ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಎಲ್ಲ ಕೈದಿಗಳಿಗೂ ಹಾಸಿಗೆ ಹಾಗೂ ಇತರ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಹಾಸಿಗೆಯಲ್ಲಿರುವ ಕೀಟಗಳು ಕಚ್ಚುವುದರಿಂದ ಮರಣ ಸಂಭವಿಸುವುದಿಲ್ಲ. ಕೆಲವೊಂದು ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕೀಟಗಳು ಮುತ್ತಿಕೊಂಡಾಗ, ಅದೇ ಸ್ಥಿತಿಯಲ್ಲಿ ದೀರ್ಘಕಾಲದ ವರೆಗೆ ಮುಂದುವರಿದರೇ ತೀವ್ರವಾಗಿ ರಕ್ತಹೀನತೆ ಉಂಟಾಗುತ್ತದೆ.

ಕಾಲಮಿತಿಯಲ್ಲಿ ಸೂಕ್ತ ಚಿಕಿತ್ಸೆ ನೀಡದಿದ್ದರೆ ಬೇಗ ಸಾವು ಸಂಭವಿಸುತ್ತದೆ ಎಂದು ಕೆಂಟುಕಿ ವಿಶ್ವವಿದ್ಯಾಲಯದ ಕೀಟಶಾಸ್ತ್ರಜ್ಞ ಮೈಕೆಲ್ ಪಾಟರ್ ತಿಳಿಸಿದ್ದಾರೆ. ಹೀಗಾಗಿ 5 ಲಕ್ಷ ಡಾಲರ್ (ಸುಮಾರು 4 ಕೋಟಿ ರೂ) ಗಳನ್ನ ಮಂಜೂರು ಮಾಡಲಾಗಿದೆ. ಜೊತೆಗೆ ಜೈಲಿನಲ್ಲಿರುವ ಕೈದಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶಿಸಿದೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ