Kornersite

Bengaluru Just In Karnataka State

Jagadish Shettar: ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್?

Hubballi : ಬಿಜೆಪಿ(BJP)ಯ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ.

ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲಿಯೇ ಶೆಟ್ಟರ್ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ತೆರಳಿ ಅವರು ಹೈಕಮಾಂಡ್ ದೊಂದಿಗೆ ಚರ್ಚೆ ನಡೆಸಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು ಸಿಎಂ ಬೊಮ್ಮಾಯಿ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲಿಯೇ ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ. ಅಲ್ಲದೇ ಇಂದೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.


ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ಶೆಟ್ಟರ್, ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಈಗಾಗಲೇ ಕಾಂಗ್ರೆಸ್ ವೇದಿಕೆ ಸಿದ್ಧಗೊಂಡಿದ್ದು, ಶೆಟ್ಟರ್‌ ಅವರನ್ನು ಕರೆತರಲು ಹುಬ್ಬಳ್ಳಿಯಿಂದ 2 ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಡಿಕೆಶಿ ಆಪ್ತ ಯು.ಬಿ. ಶೆಟ್ಟಿ ಹೆಸರಿನಲ್ಲಿ ಹೆಲಿಕಾಪ್ಟರ್ ಬುಕ್ ಆಗಿದೆ ಎನ್ನಲಾಗಿದೆ. ಮಧ್ಯಾಹ್ನದ ನಂತರ ಶೆಟ್ಟರ್ ಬೆಂಗಳೂರಿಗೆ ತೆರಳಲಿದ್ದಾರೆ. ಶಿರಸಿಯಿಂದ ಮರಳಿದ ನಂತರ ಬೆಂಗಳೂರು ಕಡೆ ಮುಖಮಾಡಲಿದ್ದು, ಈ ಸಂದರ್ಭದಲ್ಲಿ ಶೆಟ್ಟರ್ ಜೊತೆ ಮಾಜಿ ಶಾಸಕರು, ಕೆಲ ನಿಗಮ ಮಂಡಳಿ ಅಧ್ಯಕ್ಷರು ಕಾಂಗ್ರೆಸ್‌ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ