Kornersite

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಹಕಾರ ಇಲ್ಲದಿದ್ದರೆ ವ್ಯಕ್ತಿ ಎತ್ತರಕ್ಕೆ ಬೆಳೆಯಲ್ಲ. ಕೇಳಿದ್ದೆಲ್ಲವನ್ನೂ ಪಕ್ಷ ನೀಡಿದೆ. ಸ್ಥಾನಮಾನ ಸಿಗಲಿ, ಸಿಗದಿರಲಿ. ದೇಶಕ್ಕಾಗಿ ಕೆಲಸ ಮಾಡಬೇಕಿರುವುದು ನಾವು ನಡೆದುಕೊಂಡು ಬಂದ ದಾರಿಯಾಗಿದೆ. ಪಕ್ಷದ ಸಹಕಾರ ಇಲ್ಲದಿದ್ರೆ ವ್ಯಕ್ತಿ ಸಿಎಂ ಆಗಲಾರ. ಬಿ.ಬಿ ಶಿವಪ್ಪರನ್ನು ಎದುರು ಹಾಕಿಕೊಂಡು ಶೆಟ್ಟರ್ ಅವರನ್ನು ವಿಪಕ್ಷ ನಾಯಕ ಮಾಡಿದ್ದೆ. ನಾನು, ಅನಂತ ಕುಮಾರ್ ಅವರಿಗೆ ಕಾವಲು ಇದ್ದೆವು. ನಮ್ಮ ಜತೆ ಹೆಜ್ಜೆ ಹಾಕುವುದು ಅವರ ಜವಾಬ್ದಾರಿ. ಕಾಂಗ್ರೆಸ್ ಜೊತೆ ಕೈಜೋಡಿಸಲು ಹೋಗಿರುವು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದಾರೆ.


ಬಿಜೆಪಿ ನನಗೆ, ಶೆಟ್ಟರ್‍ಗೆ, ಸವದಿಗೆ, ಈಶ್ವರಪ್ಪಗೆ ಸಮಾನ ಸ್ಥಾನಮಾನ ಕೊಟ್ಟು, ಅನೇಕ ಅವಕಾಶ ಕೊಟ್ಟಿದೆ. ನನ್ನಂಥ ಸಾಮಾನ್ಯ ಕಾರ್ಯಕರ್ತ ರಾಜ್ಯದ ಉದ್ದಗಲಕ್ಕೂ ಜನರ ಪ್ರೀತಿ ಗಳಿಸಲು ಬಿಜೆಪಿ ಕಾರಣವಾಗಿದೆ. ಸವದಿಯವರು ಸೋತರೂ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಡಿಸಿಎಂ ಹುದ್ದೆ ನೀಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಹಳೇಬೇರು ಹೊಸ ಚಿಗುರು ಸೇರಿ ಈ ಪಕ್ಷ ಬೆಳೆಸಬೇಕಾಗಿದೆ. ಪಕ್ಷದ ಹೈಕಮಾಂಡ್ ನಿಮ್ಮನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ತಿಳಿಸಿತ್ತು. ಶೆಟ್ಟರ್ ಎಲ್ಲವನ್ನೂ ಧಿಕ್ಕರಿಸಿ ಲಿಂಗಾಯತ ಸಮಾಜವನ್ನು ಒಡೆಯಲು ಪ್ರಯತ್ನಿಸಿದ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸವದಿ ಇನ್ನೂ ಶಾಸಕರಾಗಿಯೂ ಮುಂದುವರಿಯಬಹುದಿತ್ತು. ಸಚಿವರಾಗಿ ಮಾಡಲು ಯಾವುದೇ ಅಡ್ಡಿ ಇರಲಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದು, ಜನತೆಗೆ ಮಾಡಿದ ದ್ರೋಹವಾಗಿದೆ. ಸವದಿ ಅವರೇ ನಿಮಗೆ ಏನು ಅನ್ಯಾಯ ಆಗಿತ್ತು? ನಿಮಗೆ ಏನು ಆತಂಕ ಇತ್ತು? ನೀವು ಮಾಡಿದ್ದು ನಂಬಿಕೆ ದ್ರೋಹ, ವಿಶ್ವಾಸ ದ್ರೋಹ. ಜನ ಸವದಿಯವರನ್ನು ಕ್ಷಮಿಸಲ್ಲ ಎಂದು ಗುಡುಗಿದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ