Karawar : ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕೆಲವರ ಕುತಂತ್ರದಿಂದಾಗಿ ನನಗೆ ಟಿಕೆಟ್ ತಪ್ಪಿತು. ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಾಟೆಯಾದರೂ ನಾವೆಲ್ಲ ಸಹೋದರರಂತೆ ಇದ್ದೇವು. ಆದರೆ, ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹೀಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.