Kornersite

Bengaluru Just In Karnataka State

Karnataka Assembly Election: ನಾನು ಕಣದಲ್ಲಿ ಇದ್ದೇ ಇರುತ್ತೇನೆ; ರಾಜೀನಾಮೆ ಸಲ್ಲಿಸಿದ ಶೆಟ್ಟರ್!

Hubli : ಮಾಜಿ ಸಿಎಂ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಹಿರಿಯರಿಗೆ ಟಿಕೆಟ್ ಇಲ್ಲ ಎಂಬ ಸೂತ್ರಧಡಿ ಹೈಕಮಾಂಡ್ ಶೆಟ್ಟರ್ ಗೆ ಹೈಕಮಾಂಡ್ ಸ್ಪರ್ಧೆ ಬೇಡ ಎಂದು ಸೂಚಿಸಿತ್ತು. ಆದರೆ, ಹೈಕಮಾಂಡ್‌ ನಾಯಕರ ಸಂಧಾನಕ್ಕೆ ಜಗ್ಗದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಬಿಜೆಪಿಗೆ (BJP) ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.


ಇಂದು ರಾತ್ರಿ ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ ಸಂಧಾನ ಮಾತುಕತೆ ನಡೆಸಿದ್ದರು. ಆದರೆ ಈ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.
15 ದಿನಗಳ ಹಿಂದೆ ರಾಜಕೀಯ ನಿವೃತ್ತಿಯಾಗಬೇಕು ಎಂದು ಹೇಳಿದ್ದರೆ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿದ್ದೆ. ಆದರೆ ಯಾವುದೇ ಮಾಹಿತಿ ನೀಡದೆ ಕೊನೆಯವರೆಗೆ ಸತಾಯಿಸಿದ್ದಾರೆ. ಈ ಕಾರಣಕ್ಕೆ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.


ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡುತ್ತೇನೆ. ನಂತರ ನನ್ನ ಹಿತೈಷಿಗಳ ಜೊತೆ ಸೇರಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶೆಟ್ಟರ್‌ ಹೇಳಿದ್ದಾರೆ.


ನರೇಂದ್ರ ಮೋದಿ, ಅಮಿತ್‌ ಶಾ ಅವರಿಗೆ ತಿಳಿಯದಂತೆ ನನ್ನ ವಿರುದ್ಧ ಕೆಲವರು ಷಡ್ಯಂತ್ರ ಮಾಡಿದ್ದಾರೆ. ನನಗೆ ಟಿಕೆಟ್‌ ಬಿಟ್ಟು ದೊಡ್ಡ ಹುದ್ದೆ, ಕುಟುಂಬದವರಿಗೆ ಟಿಕೆಟ್‌ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ನಾನು ಮೊದಲೇ ನಿರ್ಧಾರ ಮಾಡಿದಂತೆ ಈ ಚುನಾವಣೆಯಲ್ಲಿ ನಿಲ್ಲುತ್ತೇನೆ. ಭಾರೀ ಮತಗಳ ಅಂತರದಿಂದ ಈ ಬಾರಿ ನನ್ನ ಗೆಲುವು ಶತಸಿದ್ಧ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ