Kornersite

Bengaluru Just In Karnataka State

Karnataka Assembly Election: ಶೆಟ್ಟರ್ ರಾಜೀನಾಮೆಯಿಂದ ವೈಯಕ್ತಿಕವಾಗಿ ನೋವಾಗಿದೆ- ಸಿಎಂ

Hubli : ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರ ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರು. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ತೆಗೆದುಕೊಂಡಿದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆದಿದ್ದು, ಯಡಿಯೂರಪ್ಪ ನಮಗೆ ಆದರ್ಶರು. ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.


ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ನಿಜ. ಆದರೆ ಅದಕ್ಕೆ ತಂತ್ರ -ಪ್ರತಿತಂತ್ರ ರೂಪಿಸುತ್ತೇವೆ. ನಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆ. ಸ್ವತಃ ಶೆಟ್ಟರ್ ಜೊತೆ ಅಮಿತ್ ಶಾ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಎಲ್ಲದಕ್ಕೆ ನಾನು ಉತ್ತರ ಕೊಡಲ್ಲ. ಹೊಸ ಬೆಳವಣಿಗಾಗಿ ಈ ಪ್ರಯತ್ನ ಎಂದು ಹೇಳಿದ್ದಾರೆ.

ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಗಿತ್ತು. ದೆಹಲಿ ಮಟ್ಟದಲ್ಲಿ ಹುದ್ದೆ ಕೊಡುವುದಾಗಿ ನಡ್ಡಾ, ಅಮಿತ್ ಶಾ ಹೇಳಿದ್ದರು. ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ದೆ. ಅಲ್ಲದೇ ಅವರು ಹೇಳಿರುವವರಿಗೆ ಟಿಕೆಟ್ ಕೊಡುತ್ತೇವೆ ಎಂದಿತ್ತು. ಆದರೂ ಶೆಟ್ಟರ್ ರಾಜೀನಾಮೆ ನೀಡಿರುವುದು ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಅತಿಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ. ಈ ಭಾಗದಲ್ಲಿ ಲಿಂಗಾಯತ ಸಮುದಾಯವು ಬಿಜೆಪಿಗೆ ಹೆಚ್ಚಿನ ಸೀಟ್ ಗಳನ್ನು ನೀಡಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳೆದು ನಿಂತಿದೆ. ಎರಡನೇ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ. ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಎಲ್ಲರಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಮುಂದುವರಿಸಿಕೊಂಡು ಹೋದರೆ ಉತ್ತಮವಾಗಿರುತ್ತಿತ್ತು. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಇದು ಹೈಕಮಾಂಡ್ ತೀರ್ಮಾನವಾಗಿದೆ. ಬದಲಾವಣೆ ತರುವ ಅಂತಹ ಕಾಲ ಇದು. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ ಎಂದು ಹೇಳಿದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ