Kornersite

Just In Sports

IPL 2023: ಎರಡನೇ ಗೆಲುವು ದಾಖಲಿಸಿದ ಮುಂಬಯಿ; ಸೋಲು ಒಪ್ಪಿಕೊಂಡ

Mumbai : ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್‌ ನೆರವಿನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ (KolkataKnight Riders) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.


ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ (KKR) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತ್ತು. 186 ರನ್‌ಗಳ ಗುರಿ ಬೆನ್ನತ್ತಿದ್ದ ಮುಂಬಯಿ ಇಂಡಿಯನ್ಸ್‌ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ 17.4 ಓವರ್‌ ಗಳಲ್ಲಿಯೇ 186 ರನ್‌ ಗಳಿಸಿ ಗೆದ್ದು ಬೀಗಿತು.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ಇಶಾನ್‌ ಕಿಶನ್‌ ಜೋಡಿ ಆಕ್ರಮಣಕಾರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 4.5 ಓವರ್‌ ಗಳಲ್ಲಿ 65 ರನ್‌ ಗಳಿಸಿತು. ಈ ವೇಳೆ ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 20 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೆ 25 ಎಸೆತಗಳಲ್ಲಿ ಸ್ಫೋಟಕ 58 ರನ್‌ (5 ಬೌಂಡರಿ, 5 ಸಿಕ್ಸರ್)‌ ಚಚ್ಚಿದ ಇಶಾನ್‌ ಕಿಶನ್‌ ಸಹ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

ನಂತರ 3ನೇ ವಿಕೆಟ್‌ಗೆ ಜೊತೆಯಾದ ಸೂರ್ಯಕುಮಾರ್‌ ಯಾದವ್‌ (Suryakumar Yadav), ತಿಲಕ್‌ ವರ್ಮಾ ಸಹ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿಗೆ ನೆರವಾದರು. ಕೇವಲ 25 ಎಸೆತಗಳಲ್ಲಿ 43 ರನ್‌ (3 ಸಿಕ್ಸರ್‌, 4 ಬೌಂಡರಿ) ಗಳಿದರೆ, ತಿಲಕ್‌ ವರ್ಮಾ 30 ರನ್‌ (25 ಎಸೆತ, 1 ಸಿಕ್ಸರ್‌, 3 ಬೌಂಡರಿ) ಬಾರಿಸಿದರು. ಈ ನಡುವೆ ನೆಹಾಲ್ ವಧೇರಾ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.
ಕೆಕೆಆರ್‌ ಪರ ಸುಯಶ್‌ ಸರ್ಮಾ 2 ವಿಕೆಟ್‌ ಕಿತ್ತರೆ, ಶಾರ್ದೂಲ್‌ ಠಾಕೂರ್‌, ವರುಣ್‌ ಚಕ್ರವರ್ತಿ ಹಾಗೂ ಲಾಕಿ ಫರ್ಗುಸನ್ ತಲಾ ಒಂದೊಂದು ವಿಕೆಟ್‌ ಪಡೆದರು.


ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಪರ ವೆಂಕಟೇಶ್ ಅಯ್ಯರ್ (Venkatesh Iyer) ಏಕಾಂಗಿ ಹೋರಾಟ ನಡೆಸಿದರು. ಆರಂಭಿಕರಾಗಿ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಜ್, ನಾರಾಯಣ್‌ ಜಗದೀಶನ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. ಅಯ್ಯರ್‌ 51 ಎಸೆತಗಳಲ್ಲಿ ಸ್ಫೋಟಕ 104 ರನ್‌ (9 ಸಿಕ್ಸರ್‌, 6 ಬೌಂಡರಿ) ಸಿಡಿಸಿದರು.


ನಂತರ ಕಣಕ್ಕಿಳಿದರವರಲ್ಲಿ ಯಾರೊಬ್ಬರು ಉತ್ತಮ ಪ್ರದರ್ಶನ ತೋರದೇ ಇದ್ದರಿಂದ ಕೆಕೆಆರ್‌ ತಂಡ 185 ರನ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮುಂಬಯಿ ಪರ ಹೃತಿಕ್‌ ಶೋಕೀನ್‌ 2 ವಿಕೆಟ್‌ ಪಡೆದರೆ, ಕ್ಯಾಮರೂನ್ ಗ್ರೀನ್, ದುವಾನ್‌ ಜಾನ್ಸೆನ್‌, ಪಿಯೂಷ್‌ ಚಾವ್ಲಾ ಹಾಗೂ ರಿಲೇ ಮೆರೆದಿಥ್‌ ತಲಾ ಒಂದೊಂದು ವಿಕೆಟ್‌ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್