Kornersite

Crime Just In National

Breaking News: ಬಿಸಿಲಿನ ತಾಪ; ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 11 ಜನ ಸಾವು!

Mumbai : ದೇಶದ ಹಲವು ಪ್ರದೇಶಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ರೋಸಿ ಹೋಗಿದ್ದಾರೆ. ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಆಗಮಿಸಿದ್ದ 11 ಜನ ಸಾವನ್ನಪ್ಪಿದ್ದಾರೆ.

ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಕಾರ್ಯಕ್ರಮಕ್ಕೆ ಆಗಮಿಸಿದ್ದರು.


ಸಮಾರಂಭ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಮೈದಾನದಲ್ಲಿ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಜನರಿಗೆ ಮಾಡಲಾಗಿತ್ತು. ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಹಾಗೂ ಶೆಡ್‍ಗಳ ವ್ಯವಸ್ಥೆಯೂ ಇರಲಿಲ್ಲ. ಇವೆಲ್ಲದರ ಮಧ್ಯೆ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ಗೆ ಏರಿತ್ತು.


ಈ ಬೆಗೆ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಜನ ಸಾವನ್ನಪ್ಪಿದ್ದು, 50 ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ತೆಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾತನಾಡಿ, ಘಟನೆಯು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ