Kornersite

Bengaluru Just In Karnataka State

Breaking News: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ; ಜಗದೀಶ ಶೆಟ್ಟರ್ ವಿರುದ್ಧ ಯಾರಿಗೆ ಟಿಕೆಟ್?

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಜೆಪಿ, ಸದ್ಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.

ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. 6 ಜನ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಲಾಗಿತ್ತು.


ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹೈಕಮಾಂಡ್ ಮಹೇಶ್ ಟೆಂಗಿನಕಾಯಿಯನ್ನು ಕಣಕ್ಕೆ ಇಳಿಸಿದೆ. ಚಾಮರಾಜ ಕ್ಷೇತ್ರದ ಹಾಲಿ ಶಾಸಕ ರಾಮದಾಸ್ ಗೂ ಟಿಕೆಟ್ ತಪ್ಪಿದ್ದು, ಶ್ರೀವತ್ಸ್ ಅವರಿಗೆ ಟಿಕೆಟ್ ನೀಡಲಾಗಿದೆ.
ಯಾರಿಗೆಲ್ಲ ಟಿಕೆಟ್?

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್
ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್
ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
ರೋಣ ಕ್ಷೇತ್ರ – ಕಳಕಪ್ಪ ಬಂಡಿ
ಮಹದೇವಪುರ – ಮಂಜುಳಾ ಲಿಂಬಾವಳಿ

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ