Kornersite

Just In Sports

IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!

IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ.

ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಹಿಟ್ಮ್ಯಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ 1033 ರನ್ ಬಾರಿಸಿದ್ದು, ಇದು ದಾಖಲೆಯಾಗಿದೆ.


ಕೆಕೆಆರ್ ವಿರುದ್ಧ ರೋಹಿತ್ ಶರ್ಮಾ ನಾಲ್ಕು ಶತಕಗಳನ್ನು ಬಾರಿಸಿದ್ದು, 51.65 ಸರಾಸರಿ ಮತ್ತು 133.59 ಸ್ಟ್ರೈಕ್ ರೇಟ್ನಲ್ಲಿ 1033 ರನ್ ಗಳನ್ನು ಗಳಿಸಿದ್ದಾರೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1029 ರನ್ ಬಾರಿಸಿದ್ದ ಶಿಖರ್ ಧವನ್ ಈ ದಾಖಲೆಯನ್ನು ತಮ್ಮ ಖಾತೆಗೆ ಬರೆಯಿಸಿಕೊಂಡಿದ್ದರು.


ಡೆಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಡೇವಿಡ್ ವಾರ್ನರ್, ಕೆಕೆಆರ್ ವಿರುದ್ಧ 1018 ರನ್ ಗಳಿಸಿದ್ದು, ಮೂರನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ವಿರುದ್ಧ 1005 ಬಾರಿಸಿ, 4ನೇ ಸ್ಥಾನವನ್ನು ಅವರೇ ಉಳಿಸಿಕೊಂಡಿದ್ದಾರೆ. ಇನ್ನು ಐದನೇ ಸ್ಥಾನದಲ್ಲಿ ಆರ್ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಇದ್ದು, ಕಿಂಗ್ ಕೊಹ್ಲಿ ಚೆನ್ನೈ ವಿರುದ್ಧ 979 ರನ್ ಕಲೆ ಹಾಕಿದ್ದಾರೆ. ಇಂದು ಕೊಹ್ಲಿಗೆ ಸಾವಿರದ ಗಡಿ ದಾಟುವ ಅವಕಾಶವಿದೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್