Bangalore : ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ (ST Somashekhar) ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆಸ್ತಿ (Assets)ಘೋಷಣೆ ಮಾಡಿದ್ದಾರೆ.
ಅಲ್ಲದೇ, ಸೋಮಶೇಖರ್ 1 ಕೋಟಿ ರೂ. ಗೂ ಅಧಿಕ ಸಾಲದಲ್ಲಿದ್ದಾರೆ. ಸೋಮಶೇಖರ್ ಅವರು ಒಟ್ಟು 1.22 ಕೋಟಿ ರೂ. ಸಾಲ ಹೊಂದಿದ್ದು, ಕುಟುಂಬದ ಸದಸ್ಯರಿಗೆ 2.46 ಕೋಟಿ ರೂ. ಸಾಲ ನೀಡಿದ್ದಾರೆ. ಪುತ್ರನಿಗೆ 1.23 ಕೋಟಿ ರೂ. ಸಾಲ ನೀಡಿದರೆ, ತನ್ನ ಪತ್ನಿಗೆ 16 ಲಕ್ಷ ರೂ. ಹಾಗೂ ತಾಯಿ ಸೀತಮ್ಮ ಅವರಿಗೆ ಒಂದು ಕೋಟಿ ರೂ. ಸಾಲ ನೀಡಿದ್ದಾರೆ. ಸಹೋದರ ಎಸ್.ಟಿ. ಶ್ರೀನಿವಾಸ್‌ಗೆ 6.50 ಲಕ್ಷ ರೂ ಸಾಲ ನೀಡಿದ್ದಾರೆ.
ಎಸ್.ಟಿ. ಸೋಮಶೇಖರ್ ಮತ್ತು ಅವರ ಮನೆಯ ಸದಸ್ಯರ ಹೆಸರಿನಲ್ಲಿ ಕೋಟ್ಯಾಂತರ ಮೌಲ್ಯದ ಆಸ್ತಿ ಇದೆ. ಸೋಮಶೇಖರ್ ಅವರ ಹೆಸರಿನಲ್ಲಿ 27.88 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, 5.46 ಕೋಟಿ ರೂ. ಮೌಲ್ಯದ ಚರಾಸ್ತಿ, 8.91 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಪತ್ನಿ ರಾಧಾ ಹೆಸರಲ್ಲಿ 53.86 ಲಕ್ಷ ರೂ. ಮೌಲ್ಯದ ಚರಾಸ್ತಿ, 8.72 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, ಪುತ್ರ ನಿಶಾಂತ್ ಹೆಸರಲ್ಲಿ 48.18 ಲಕ್ಷ ರೂ. ಚರಾಸ್ತಿ, 3.75 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿ ಇದೆ.
ಏ.14ರಂದು ನಾಮಪತ್ರ ಸಲ್ಲಿಸಿದ್ದ ಎಸ್.ಟಿ. ಸೋಮಶೇಖರ್ ನಂತರ ಮೈಸೂರಿಗೆ ತೆರಳಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದಾರೆ. ರಾಜ್ಯದಲ್ಲಿ ಮೇ. 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರ ಬರಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕವಾಗಿದೆ.