Bangalore :ಮತ್ತೆ ರಾಜ್ಯದಲ್ಲಿ ಕೊರೊನಾ(Corona) ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಹೆಚ್ಚಳ ಕಂಡು ಬರುತ್ತಿದೆ.
ನಿನ್ನೆ ಒಂದೇ ದಿನ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ. ಇದೇ ತಿಂಗಳ ಏ.13ರಂದು 328 ಜನರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ದೇಶದಲ್ಲಿ 9,111 ಮಂದಿಗೆ ಕೊರೊನಾ ದೃಢಪಟ್ಟಿದ್ದು 24 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ನಲ್ಲಿ 6, ಉತ್ತರ ಪ್ರದೇಶದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.