Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ.
ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲಾಗದೆ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ತಬ್ಬಿಬ್ಬಾಗಿದ್ದಾರೆ.
ಸೋಮಣ್ಣ ಮೈಸೂರು (Mysuru) ಜಿಲ್ಲಾ ಉಸ್ತುವಾರಿಯಾಗಿದ್ದಾಗ ಏನು ಕೊಡುಗೆ ಕೊಟ್ರಿ? ಈಗ ಮತ ಕೇಳೋಕೆ ಬಂದಿದ್ದೀರಾ? ಎಂದು ಸೋಮಣ್ಣಗೆ ಗ್ರಾಮಸ್ಥರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳಿತ್ತಿದ್ದ ವೇಳೆ ವೀಡಿಯೋ ಮಾಡುತ್ತಿದ್ದ ವ್ಯಕ್ತಿಯ ಕೈಯಿಂದ ನಾಯಕರು ಮೊಬೈಲ್ ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ವಿ ಸೋಮಣ್ಣ ಅವರು ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸ್ಪರ್ಧಿಸಿದ್ದಾರೆ.