Kornersite

Crime Just In National

Rice Mill Collapse: ರೈಸ್ ಮಿಲ್ ಕುಸಿತ; ನಾಲ್ವರು ಬಲಿ

Hariyana: ಹರಿಯಾಣದ ಕರ್ನಾಲ್ ನಲ್ಲಿ ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದ (Collapse) ಪರಿಣಾಮ ನಾಲ್ವರು ಸಾವನ್ನಪ್ಪಿ, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಕಟ್ಟಡ ಕುಸಿದ ಸಂದರ್ಭದಲ್ಲಿ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲಾಗಿದೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಘಟನೆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗುವುದು. ರೈಸ್ ಮಿಲ್ ಮಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಶ್ ಯಾದವ್ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ