Mangalore : ಇಲ್ಲಿಯ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ ಬಾಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ವ್ಯಕ್ತಿಗಲನ್ನು ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ, 45 ವರ್ಷದ ಜನಾರ್ದನ ಬರಿಂಜ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು.

ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
ಚಾಲಕರಾಗಿದ್ದ ಜನಾರ್ದನ್ ಬರಿಂಜ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯ ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಜನದಟ್ಟಣೆಯಿಂದ ಕೂಡಿರುವ ನೆಹರೂ ಮೈದಾನದಲ್ಲಿ ಕೊಲೆ ನಡೆದಿದೆ. ಹಗಲಿನಲ್ಲಿ ಹತ್ಯೆ ನಡೆದಿರುವ ಬಗ್ಗೆ ಡಿಸಿಪಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.