Kornersite

Bollywood Entertainment Just In Karnataka Sandalwood

Heart Attack: ಹಾಸ್ಯ ಕಲಾವಿದ ಹೃದಯಾಘಾತಕ್ಕೆ ಬಲಿ!

ಹೃದಯಾಘಾತವು ಚಿತ್ರರಂಗಕ್ಕೆ ಶಾಕಿಂಗ್ ಸುದ್ದಿ ನೀಡುತ್ತಲೇ ಇದೆ. ಕೊರೊನಾ ನಂತರದ ದಿನಗಳಿಂದ ಹಲವಾರು ನಟರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸದ್ಯ ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ (Allu Ramesh) ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಅವರು ಸಾವನ್ನಪ್ಪಿರುವ ವಿಷಯವನ್ನು ಕುಟುಂಬಸ್ಥಱು ಖಚಿತಪಡಿಸಿದ್ದಾರೆ. ರಮೇಶ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದವರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.


ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ ‘ನೆಪೋಲಿಯನ್’ ಚಿತ್ರದಲ್ಲಿ ನಟಿಸಿದ್ದರು. ‘ಮಧುರಾ ವೈನ್ಸ್’ ‘ರಾವಣ ದೇಶಂ’ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ಅಲ್ಲು ರಮೇಶ್ ವಿಶಾಖಪಟ್ಟಣದಲ್ಲಿ ನಾಟಕಗಳಲ್ಲಿ ನಟಿಸುತ್ತಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು.


ಅನೇಕ ತೆಲುಗು ಸಿನಿಮಾಗಳಲ್ಲಿ ಹಾಸ್ಯನಟನ ಪಾತ್ರವನ್ನು ನಿರ್ವಹಿಸಿದರು. ಯೂಟ್ಯೂಬ್‌ನಲ್ಲಿ ಪ್ರಸಾರವಾಗುವ ‘ಮಾ ವಿದಾಕುಲು’ (ನಮ್ಮ ವಿಚ್ಛೇದನ) ವೆಬ್ ಸರಣಿಯಲ್ಲಿ ನಟಿಸುವ ಮೂಲಕ ಅವರು ಹೆಚ್ಚಾಗಿ ಗುರುತಿಸಿಕೊಂಡರು. ಟಾಲಿವುಡ್ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದರೂ ತಮ್ಮ ವಿಶಿಷ್ಟ ನಟನೆ ಮೂಲಕ ಅವರು ಗಮನ ಸೆಳೆದಿದ್ದರು. ಅಲ್ಲು ರಮೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಲ್ಲು ರಮೇಶ್ ಸಾವಿಗೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,