Kornersite

Just In Sports

IPL 2023: ಹ್ಯಾಟ್ರಿಕ್ ಗೆಲುವು ಸಾಧಿಸಿದ ರೋಹಿತ್ ಪಡೆ; ಮಕಾಡೆ ಮಲಗಿದ ಹೈದರಾಬಾದ್!

Hyderabad : ಆರಂಭದ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಮುಂಬಯಿ ಇಂಡಿಯನ್ಸ್ ತಂಡವು ಈಗ ಸತತ ಹ್ಯಾಟ್ರಿಕ್ ಜಯ ಸಾಧಿಸಿದೆ. ಇನ್ನೊಂದೆಡೆ ಹೈದರಾಬಾದ್ ತಂಡ ನೀರಸ ಪ್ರದರ್ಶನ ಮುಂದುವರೆಸಿದೆ.


ಕ್ಯಾಮರೂನ್‌ ಗ್ರೀನ್‌ ಭರ್ಜರಿ ಬ್ಯಾಟಿಂಗ್ ಹಾಗೂ ಶಿಸ್ತು ಬದ್ಧ ಬೌಲಿಂಗ್ ನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಭರ್ಜರಿ ರನ್ ಕಲೆ ಹಾಕಿತ್ತು. ನಂತರ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 14 ರನ್‌ ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ನಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 192 ರನ್‌ ಗಳಿಸಿತು. 193 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಹೈದರಾಬಾದ್‌ ತಂಡ 19.5 ಓವರ್‌ಗಳಲ್ಲೇ 178 ರನ್‌ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿತು.


ಹೈದರಾಬಾದ್ ಪರ ಹ್ಯಾರಿ ಬ್ರೂಕ್‌ ಹಾಗೂ ಮಯಾಂಕ್‌ ಅಗರ್ವಾಲ್‌ ಜೋಡಿ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲರಾದರು. ಬ್ರೂಕ್‌ 9 ರನ್‌ ಗಳಿಸಿ ಔಟಾಗುತ್ತಿದ್ದಂತೆ, 3ನೇ ಕ್ರಮಾಂಕದಲ್ಲಿ ಬಂದ ರಾಹುಲ್‌ ತ್ರಿಪಾಠಿ ಸಹ 7 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಈ ನಡುವೆ ಮಯಾಂಕ್‌ ಅಗರ್ವಾಲ್‌, ನಾಯಕ ಏಡನ್‌ ಮಾರ್ಕ್ರಮ್‌ 46 ರನ್‌ಗಳ (36 ಎಸೆತ) ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು 16 ಎಸೆತಗಳಲ್ಲಿ ಸ್ಫೋಟಕ 36 ರನ್‌ ಗಳಿಸಿದರು. ನಂತರ ಬಂದ ಬ್ಯಾಟ್ಸಮನ್ ಗಳು ಅಬ್ಬರಿಸದ ಹಿನ್ನೆಲೆಯಲ್ಲಿ ಹಿನ್ನಡೆ ಅನುಭವಿಸುವಂತಾಯಿತು.ಮುಂಬಯಿ ಪರ ಜೇಸನ್ ಬೆಹ್ರೆನ್ಡಾರ್ಫ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ ತಲಾ 2, ಕ್ಯಾಮರೂನ್‌ ಗ್ರೀನ್‌ ಹಾಗೂ ಅರ್ಜುನ್‌ ತೆಂಡೂಲ್ಕರ್‌ ತಲಾ 1 ವಿಕೆಟ್‌ ಪಡೆದರು.


ಮುಂಬಯಿ ಇಂಡಿಯನ್ಸ್ ತಂಡದ ಪರವಾಗಿ ನಾಯಕ ರೋಹಿತ್ ಶರ್ಮಾ ಉತ್ತಮ ಆರಂಭದ ಭರವಸೆ ನೀಡಿದರಾದರೂ ರೋಹಿತ್ 28 ರನ್‌ ಗಳಿಸಿ ಔಟ್ ಆದರು. ಇಶಾನ್ ಕಿಶನ್ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಅದ್ಭುತ ಜೊತೆಯಾಟ ನೀಡಿ ಮಿಂಚಿದರು. ಇಶಾನ್ ಕಿಶನ್ 38 ರನ್‌, ಸೂರ್ಯಕುಮಾರ್ ಯಾದವ್ ಮತ್ತೆ ಕೇವಲ 7 ರನ್‌ ಗಳಿಸಿ ನಿರಾಸೆ ಅನುಭವಿಸಿದರು. ಕ್ಯಾಮರೂನ್ ಗ್ರೀನ್‌ಗೆ ಜೊತೆಯಾದ ತಿಲಕ್ ವರ್ಮಾ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ 28 ಎಸೆತಗಳಲ್ಲಿ 56 ರನ್‌ ಸಿಡಿಸುವ ಮೂಲಕ ರನ್ ವೇಗ ಹೆಚ್ಚಿಸುವಲ್ಲಿ ಯಶಸ್ವಿಯಾದರು. ತಿಲಕ್ ವರ್ಮಾ ಕೇವಲ 17 ಎಸೆತಗಳಲ್ಲಿ 37 ರನ್‌ಗಳಿಸಿಜಕುಯ ಗ್ರೀನ್ 40 ಎಸೆತಗಳಲ್ಲಿ 64 ರನ್ ಸಿಡಿಸಿದರು. ಕೊನೆಗೆ ಅಂತಿಮವಾಗಿ ಮುಂಬಯಿ ತಂಡವು 5 ವಿಕೆಟ್‌ ಕಳೆದುಕೊಂಡು 192 ರನ್‌ ಗಳಿಸಿತು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್