Bangalore : ರಾಜ್ಯದಲ್ಲಿ ಚುನಾವಣಾ ಕಾವು (Karnataka Assembly Elections 2023) ಜೋರಾಗಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಕೇವಲ 2 ದಿನಗಳು ಮತ್ರ ಬಾಕಿ ಇವೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು, ಹಲವೆಡೆ ದಾಳಿ (IT Raid)ನಡೆಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮಂಗಳೂರು, ಮೈಸೂರು ಸೇರಿದಂತೆ ಕೆಲವು ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಸದ್ಯ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಕುರಿತು ಮಾಹಿತಿ ಸಿಕ್ಕಿದೆ.

ಇಂದು ಬೆಳಿಗ್ಗೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಲವು ಕಾಂಗ್ರೆಸ್ ನಾಯಕರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ.