ಉಡುಪಿ : ಪ್ರಮೋದ್ ಮುತಾಲಿಕ್(Pramod Muthalik) ಅವರು, ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆಸ್ತಿ ವಿವರ ಘೋಷಿಸಿದ್ದಾರೆ.
ಮುತಾಲಿಕ್ ಅವರ ಬಲಿ ಇರುವ ಹಣ, ಆಸ್ತಿಗಿಂತ ಕೇಸ್ ಗಳೇ ಹೆಚ್ಚಾಗಿವೆ ಅನಿಸುತ್ತಿದೆ. ಪ್ರಮೋದ್ ಮತಾಲಿಕ್ ಬಳಿ ಸ್ಥಿರಾಸ್ತಿ, ವಾಹನ, ಸಾಲ ಇಲ್ಲ. ಮುತಾಲಿಕ್ ಕೈಯಲ್ಲಿ 10,500 ರೂ. ನಗದು, ಎರಡು ಬ್ಯಾಂಕುಗಳಲ್ಲಿ 2,63,500 ರೂ. ಇದೆ ಎಂದು ಘೋಷಿಸಿಕೊಂಡಿದ್ದಾರೆ. ರಾಜ್ಯದ 7 ಠಾಣೆಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ಕೇಸು ದಾಖಲಾಗಿವೆ.
ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ, ಮಾನನಷ್ಟ ಮೊಕದ್ದಮೆ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೋಮು ಗಲಭೆ, ಜೀವ ಬೆದರಿಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ ಕೇಸ್‌ಗಳು ಅವರ ವಿರುದ್ಧ ದಾಖಲಾಗಿವೆ ಎಂದು ಆಯೋಗಕ್ಕೆ (Election Commission) ತಿಳಿಸಿದ್ದಾರೆ.