Kornersite

Crime Just In Karnataka Politics State

Karnata Assembly Election: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ವಾಹನದಲ್ಲಿ ಈ ಚಿನ್ನಾಭಾರಣ ಪತ್ತೆಯಾಗಿದೆ. ಮಲಬಾರ್, ಜೋಯಾಲುಕಾಸ್, ಕಲ್ಯಾಣ್ ಜ್ಯುವೆಲರ್ಸ್ ಸೇರಿದಂತೆ ಇನ್ನಿತರ ಕಂಪನಿಗಳ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು